ಜನ ಮನದ ನಾಡಿ ಮಿಡಿತ

Advertisement

ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳ ಬಂಧನ

ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ‌ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.

ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!