ಬಂಟ್ವಾಳ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಉತ್ತರ ಪ್ರದೇಶ ಮೂಲದ ಬಬುಲು ಸಹಾನಿ, ರಾಮ್ ಗೋವಿಂದ ಸಹಾನಿ, ಅಮಿತ್ ಕುಮಾರ್, ಸತ್ಯೇಂದ್ರ ಸಹಾನಿ, ಸೈದಾನ್ ಸಹಾನಿ, ಅಭಯ್ ನಾರಾಯಣ್ ಬಂಧಿತ ಆರೋಪಿಗಳು.
ಪರಂಗಿಪೇಟೆಯಲ್ಲಿ ಅಕ್ರಮ ಮರಳು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮೂಲದ ಆರು ಮಂದಿಯ ಮೇಲೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ 2017 ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿಗಳಾದ ಇವರು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಊರಿಗೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಬಿ.ಹಾಗೂ ಪೋಲಿಸ್ ಉಪನಿರೀಕ್ಷಕರುಗಳಾದ ಹರೀಶ್ ಎಂ.ಆರ್,ಮತ್ತು ಮೂರ್ತಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಯೋಗೇಶ್ ಡಿ.ಎಲ್, ವಿಜಯಕುಮಾರ್ ಮಾಹಿತಿ ಸಂಗ್ರಹಿಸಿ ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…