ನರೇಂದ್ರ ಮೋದಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023ರ ಪಂದ್ಯದಲ್ಲಿ ಭಾರತ 7 ವಿಕೆಟ್ ಗಳಿಂದ ಪಾಕಿಸ್ತಾನವನ್ನು ಮಣಿಸಿದೆ.

ಗುಜರಾತ್ ನ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕ್ ತಂಡವು ಕೇವಲ 191 ರನ್ನುಗಳಿಗೆ ಆಲೌಟ್ ಆಗಿತ್ತು.ಈ ಗುರಿಯನ್ನು ಬೆನ್ನಟ್ಟಿದ ಭಾರತ ತಂಡವು 30.3 ಓವರ್ ಗಳಲ್ಲಿ 192/3 ಗಳಿಸುವ ಮೂಲಕ ಗೆಲುವಿನ ದಡ ತಲುಪಿತು. ತಂಡದ ಗೆಲುವಿನಲ್ಲಿ ಮಹತ್ತರ ಪಾತ್ರವಹಿಸಿದ ರೋಹಿತ್ ಶರ್ಮಾ (86), ಅಯ್ಯರ್ (53) ರನ್ ಗಳಿಸಿದರು.



