ವಿಟ್ಲ: ಕುಡ್ತಮುಗೇರು ಎಂ. ಎಚ್. ಶಾಮಿಯಾನ ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್ ಅಪ್ ವಾಹನ ಕಳವು ಪ್ರಕರಣದ 8ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ವಾಹನ ಪತ್ತೆ ಮಾಡುವಲ್ಲಿ ವಿಫಲರಾಗಿದ್ದಾರೆ.
ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಸೆ. 23 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರಲ್ಲಿ ಶಾಮಿಯಾನ ಸಾಮಾಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿದ್ದು, ಗೋಣಿಕೊಪ್ಪದಲ್ಲಿ ಅಗೋಚರವಾದ ಪಿಕಪ್ ಎಲ್ಲಿ ಎಂಬುದು ಇನ್ನೂ ಪತ್ತೆಯಾಗಿ ಅಲ್ಲ.
ಗೋಣಿಕೊಟ್ಟದ ಗುಜುರಿ ಅಂಗಡಿಯಿಂದ ಶಾಮಿಯಾನದ ಪಿಕಪ್ ನಲ್ಲಿದ್ದ ಟಿನ್ ಶೀಟ್ ಹಾಗೂ ಕಬ್ಬಿಣದ ಪೈಪ್ ಗಳನ್ನು ಹಿಂದಿರುಗಿಸಿದ್ದಾರೆ. 2015ಮಾಡೆಲ್ ನ 8ಲಕ್ಷ ಮೌಲ್ಯದ ಪಿಕಪ್ ವಾಹನವನ್ನು ಏನು ಮಾಡಿದರೆಂಬ ಕುರುಹು ಪತ್ತೆ ಹಚ್ಚುವಲ್ಲಿ ಪೋಲೀಸ್ ಇಲಾಖೆ ವಿಫಲವಾಗಿದೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…