ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾದ ಘಟನೆ ಸಂಗಬೆಟ್ಟು ಗ್ರಾಮದ ಸಿದ್ದಕಟ್ಟೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಬಜಿರೆ ಗುಂಡುರಿ ಗ್ರಾಮದ ಕೆರೆಕೋಡಿ ನಿವಾಸಿ ತಂಗಮ್ಮ ( 73) ಗಾಯಗೊಂಡ ಮಹಿಳೆ.
ತಂಗಮ್ಮ ಅವರು ಸಿದ್ದಕಟ್ಟೆಯಲ್ಲಿರುವ ಖಾಸಗಿ ಕ್ಲಿನಿಕ್ ಒಂದರಲ್ಲಿ ಕೆಲಸಮಾಡುತ್ತಿದ್ದು, ಚಹಾ ಕುಡಿಯುವ ಉದ್ದೇಶದಿಂದ ಹೋಟೆಲ್ ಗಾಗಿ ರಸ್ತೆ ದಾಟುವ ವೇಳೆ ಅತೀ ವೇಗ ಮತ್ತು ನಿರ್ಲಕ್ಷ್ಯ ದಿಂದ ಬೈಕ್ ಸವಾರನೋರ್ವ ಡಿಕ್ಕಿ ಹೊಡೆದಿದ್ದಾನೆ.
ಘಟನೆಯಿಂದ ಗಾಯಗೊಂಡ ಇವರನ್ನು ಮೂಡಬಿದಿರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಮಂಗಳೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ .
ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…