ಉಡುಪಿ: ಬೈಲೂರಿನ ಉಮಿಕಲ್ ಬೆಟ್ಟದ ತುದಿಯಲ್ಲಿ ಪ್ರತಿಷ್ಠಾಪಿಸಲಾದ ಕಂಚಿನದ್ದೆಂದು ಹೇಳಲಾಗುತ್ತಿದ್ದ ಪರಶುರಾಮನ ವಿಗ್ರಹದ ಅಸಲಿಯತ್ತು ಕಡೆಗೂ ಬಯಲಾಗಿದೆ. ಡ್ರೋನ್ ಕ್ಯಾಮರಾದಲ್ಲಿ ನಕಲಿ ಮೂರ್ತಿಯ ಅಸಲಿ ಮುಖ ಜಗಜ್ಜಾಹೀರಾಗಿದೆ.
ಮೂರ್ತಿ ತೆರವುಗೊಳಿಸುವುದಕ್ಕೂ ಮೊದಲು ಮೂರ್ತಿಯ ಸುತ್ತ ದಪ್ಪದ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹೊದಿಸಲಾಗಿತ್ತು. ಇದರಿಂದ ಯಾರಿಗೂ ಮೂರ್ತಿಯ ಸತ್ಯಾಸತ್ಯತೆ ಗೊತ್ತಾಗುತ್ತಿರಲಿಲ್ಲ. ಅಲ್ಲದೇ ನಿಷೇಧವಿರುವುದರಿಂದ ಬೆಟ್ಟವನ್ನು ಪ್ರವೇಶಿಸಲು ಯಾರಿಗೂ ಅವಕಾಶವೂ ಇರಲಿಲ್ಲ. ಆದರೆ ಇದೀಗ ಹಿಂದೆ ಪ್ರತಿಷ್ಠಾಪಿಸಿದ್ದ ಪರಶುರಾಮನ ಮೂರ್ತಿಯ ಪಾದ, ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಉಮಿಕಲ್ಲು ಬೆಟ್ಟದಲ್ಲಿ ಪ್ರತಿಷ್ಠಾಪಿಸಲಾಗಿದ್ದ 33 ಅಡಿ ಎತ್ತರದ ಪರಶುರಾಮನ ಕಂಚಿನ ಪ್ರತಿಮೆ ಇದೀಗ ಮಾಯವಾಗಿರುವುದು ಡ್ರೋನ್ ಕ್ಯಾಮರ ಮೂಲಕ ಬಹಿರಂಗವಾಗಿದೆ. ಇದರೊಂದಿಗೆ ವಿಗ್ರಹ ಸಂಪೂರ್ಣ ನಕಲಿ ಎಂಬುದು ನೂರಕ್ಕೆ ನೂರರಷ್ಟು ಸತ್ಯ ಎಂಬುವುದು ಜನರಿಗೆ ಮನವರಿಕೆಯಾಗಿದೆ ಎಂದು ಹೋರಾಟಗಾರರು ಹೇಳುತಿದ್ದಾರೆ.
ಪೊಲೀಸರ ಬಿಗಿ ಬಂದೋಬಸ್ತ್ ನಲ್ಲಿ ಪರಶುರಾಮ ಮೂರ್ತಿ ಮಾಯವಾಗಿದೆ. ಇದನ್ನು ಹುಡುಕಿಕೊಡುವಂತೆ, ಸಮಾನಮನಸ್ಕ ಹೋರಾಟಗಾರರ ತಂಡದ ದಿವ್ಯಾನಾಯಕ್ ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…