ನವರಾತ್ರಿಯ ಮೊದಲ ದಿನವಾದ ಇಂದು ಬೆಳಗ್ಗೆ 9.00 ಗಂಟೆಗೆ ಯುವಕ ಮಂಡಲದ ಸುವರ್ಣ ಮಹೋತ್ಸವ, ಟ್ರಸ್ಟಿನ ಬೆಳ್ಳಿ ಹಬ್ಬ ಆಚರಣೆ ಮತ್ತು ಜಂಟಿ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಯುವಕ ಮಂಡಲದ ಸಭಾಂಗಣದಲ್ಲಿ ಜರುಗಿತು.

ಸುವರ್ಣ ಮಹೋತ್ಸವ ಸಮಿತಿ ಮತ್ತು ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಬಿ. ಸೂರ್ಯಕುಮಾರ್ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷರಾದ ಶ್ರೀ ನಾಗೇಶ್ ಟಿ ಜಿ, ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಶ್ರೀ ಸುಧಾಕರ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಶ್ರೀ ರಾಮದಾಸ ಪಾವಂಜೆ, ಕೋಶಾಧಿಕಾರಿ ಶ್ರೀ ಪರಮೇಶ್ವರ ಪಿ. , ಟ್ರಸ್ಟಿನ ಗೌರವ ಪ್ರಧಾನ ಕಾರ್ಯದರ್ಶಿ ಸ್ಟ್ಯಾನಿ ಡೀ ಕೋಸ್ತ, ಯುವಕ ಮಂಡಲದ ಕೋಶಾಧಿಕಾರಿ ಹನುಮಂತ ಡಿ ಪೂಜಾರ್, ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಮೋಹನ್ ಬಂಗೇರ, ಮಹಿಳಾ ಮಂಡಲದ ಅಧ್ಯಕ್ಷರಾದ ಶ್ರೀಮತಿ ರೇಷ್ಮಾ, ಕೋಶಾಧಿಕಾರಿ ಶ್ರೀಮತಿ ರಾಜೇಶ್ವರಿ ರಾಮನಗರ, ಯುವತಿ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಕುಮಾರಿ ದಿವ್ಯಶ್ರೀ ಕೋಟ್ಯಾನ್, ಮತ್ತು ಯುವಕ, ಯುವತಿ ಮತ್ತು ಮಹಿಳಾ ಮಂಡಲದ ಸದಸ್ಯರು, ಟ್ರಸ್ಟಿಗಳು, ಸಲಹಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



