ಬಂಟ್ವಾಳ: ಭಾರತದ ಅಪರೂಪದ ವನ್ಯ ಜೀವಿಗಳಲ್ಲಿ ಒಂದಾದ ಉಡಾ (indian monitor lizard) ವನ್ನು ವ್ಯಕ್ತಿಯೋರ್ವ ಬೇಟೆಯಾಡಿ ಬಳಿಕ ಅದನ್ನು ಫೋಟೊಗಳಿಗೆ ಪೋಸ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ವಗ್ಗದಲ್ಲಿ ಬೆಳಕಿಗೆ ಬಂದಿದೆ. ಉಡಾವನ್ನು ಸಾಯಿಸಿದ ವ್ಯಕ್ತಿಯನ್ನು ವಗ್ಗದ ಸುಧಾಕರ ಎಂದು ಗುರುತ್ತಿಸಲಾಗಿದ್ದು ಆತನ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯಿದೆ 1972 ಅನ್ವಯ ಕೇಸ್ ದಾಖಲು ಮಾಡಿದ್ದಾರೆ.
ಅಕ್ಟೋಬರ್ 11 ರಂದು ಘಟನೆ ಬೆಳಕಿಗೆ ಬಂದಿದ್ದು ಬೃಹತ್ ಗಾತ್ರದ ಉಡವನ್ನು ಹಿಂಸಾತ್ಮಕ ರೀತಿಯನ್ನು ಸಾಯಿಸಿ ಬಳಿಕ ಅದನ್ನು ತೆಗೆದುಕೊಂಡು ವಿಜ್ರಂಭಿಸುತ್ತಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು ಜೊತೆಗೆ ಸಾಮಾಜಿಕ ಜಾಲಾ ತಾಣಗಳಲ್ಲಿ ಅದನ್ನು ಹರಿಯ ಬಿಟ್ಟಿದ್ದ. ದೂರು ದಾಖಲಾಗುತ್ತಿದ್ದಂತೆ ಆರೋಪಿ ತಲೆ ಮರೆಸಿಕೊಂಡಿದ್ದು, ಬಂಟ್ವಾಳ ವಲಯ ಅರಣ್ಯಾಧಿಕಾರಿಯವರು ಪ್ರಕರಣದ ತನಿಖೆ ನಡಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಅಂಥೋಣಿ ಎಸ್. ಮರಿಯಪ್ಪ ಮಾಹಿತಿ ನೀಡಿದ್ದಾರೆ.
ಉಡಾ ಸಾಯಿಸಿದ ಬಗ್ಗೆ ಪ್ರಕರಣ ದಾಖಲು ಮಾಡಲಾಗಿದ್ದು, ಆರೋಪಿ ಸುಧಾಕರ್ ತಲೆ ಮರೆಸಿಕೊಂಡಿದ್ದಾನೆ. ಆತ ಉಡಾ ಸಾಯಿಸಿ ಶೇರ್ ಮಾಡಿದ ಸಾಮಾಜಿಕ ಜಾಲಾತಾಣ ವಾಟ್ಸ್‌ಅಪ್ ಎಡ್ಮಿನ್ ನನ್ನು ವಿಚಾರಣೆ ಕರೆಸಿ ತನಿಖೆ ನಡಸಿದ್ದು ಆತನ ಸಿಡಿಆರ್ ಪರಿಶೀಲನೆ ನಢೆಸುತ್ತಿದ್ದು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದಿದ್ದಾರೆ.
ಚರ್ಮಾ, ಮೂಳೆಗಳಿಗಾಗಿ ಬೇಟೆಗಾರರ ವಕ್ರ ದೃಷ್ಟಿಗೆ ಬಿದ್ದಿರುವ ಉಡಾ ಅವನತಿಯ ಹಾದಿಯಲ್ಲಿದ್ದು ಇದನ್ನು (ಪ್ರವರ್ಗ A)ಯನ್ನುಅಳಿವಿನ ಅಂಚಿನಲ್ಲಿರುವ ಅಪರೂಪದ ಸರೀಸೃಪ ಎಂದು ಘೋಷಣೆ ಮಾಡಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…