ಉಡುಪಿ: ಉದ್ಯಾವರ ಮೂಲದ ಯುವಕನೋರ್ವ ಮಂಗಳೂರಿನ ಪಿಜಿಯೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಉದ್ಯಾವರ ನಿವಾಸಿ ರೋಸಿ ಲೂಯಿಸ್ ಅವರ ಪುತ್ರ ರೋಯಲ್ ಲೂವಿಸ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಐಸಿವೈಎಂ ಉದ್ಯಾವರ ಘಟಕದ ಸಕ್ರಿಯ ಸದಸ್ಯನಾಗಿದ್ದನು. ಉಡುಪಿಯ ಹೆಲ್ತ್ ಕೇರ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಇತ್ತೀಚೆಗೆ ಅದನ್ನು ಬಿಟ್ಟು ಮಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದರು. ಅಲ್ಲಿಯೇ ಪಿಜಿಯಲ್ಲಿ ವಾಸವಾಗಿದ್ದರು.
ನಿನ್ನೆ ರೋಯಲ್ ವಿಷ ಸೇವಿಸಿದ್ದು, ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ರೊಯಲ್ ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.



