ಉಡುಪಿ: ಬ್ರಹ್ಮಾವರ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬದ ಬಗ್ಗೆ ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಂದಾಯ ಇಲಾಖೆಯ ಸರ್ವರ್ ಸಮಸ್ಯೆಯಿಂದಾಗಿ ನೋಂದಣಿಗಾಗಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಎದುರಾಗಿದೆ. ದಿನಂಪ್ರತಿ ನೂರಾರು ಮಂದಿ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಉಪ ನೋಂದಣಾಧಿಕಾರಿ ಯವರಲ್ಲಿ ವಿಚಾರಿಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಹಳೆ ಕಚೇರಿಯಲ್ಲಿ ಮೂಲ ಸೌಕರ್ಯಗಳ ಕೊರತೆಯಿಂದ ಜನಸಾಮಾನ್ಯರಿಗೆ ಕಷ್ಟವಾಗುತ್ತಿದ್ದು, ತಕ್ಷಣವೇ ನೂತನ ಬ್ರಹ್ಮಾವರ ತಾಲೂಕು ಸೌಧಕ್ಕೆ ಸ್ಥಳಾಂತರಿಸುವಂತೆ ತಿಳಿಸಿದರು.
ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿಗಳ ಆದಾಯ ತರುವ ನೋಂದಣಿ ಪ್ರಕ್ರಿಯೆಯ ಬಗ್ಗೆ ಇಲಾಖೆ ಸರ್ವರ್ ದೋಷ ಸಹಿತ ವಿವಿಧ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿ ಜನಸಾಮಾನ್ಯರಿಗೆ ಸಂಕಷ್ಟ ಎದುರಾಗಿದೆ. ಸರ್ಕಾರ ಕೂಡಲೇ ಈ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪ್ರಮುಖರಾದ ಸುಧೀರ್ ಶೆಟ್ಟಿ, ಸಚಿನ್ ಪೂಜಾರಿ, ರಾಜು ಪೂಜಾರಿ, ಸಂತೋಷ್ ಜತ್ತನ್, ಗಣೇಶ್ ಕುಲಾಲ್, ಪ್ರದೀಪ್ ಬೈಕಾಡಿ ಮೊದಲಾದವರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…