ಮುಲ್ಕಿ: “ರಂಗೋಲಿಯನ್ನು ಸಾಂಪ್ರದಾಯಿಕವಾಗಿ ಬಿಡಿಸಬೇಕು. ರಂಗೋಲಿಯು ಭಗವಂತನನ್ನು ಆಸ್ವಾದಿಸುವ ಒಂದು ಕಲೆ” ಎಂದು ವೇದಮೂರ್ತಿ ಕೃಷ್ಣ ಭಟ್ ಪಾವಂಜೆ ಹೇಳಿದರು.
ಅವರು ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಮುಕ್ತ ರಂಗೋಲಿ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ, ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ, ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ, ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ (ರಿ), ಹಳೆಯಂಗಡಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಹಳೆಯಂಗಡಿ, ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ) ಯುವತಿ ಮತ್ತು ಮಹಿಳಾ ಮಂಡಲ (ರಿ) ಹಳೆಯಂಗಡಿ ಇವರ ಸಹಯೋಗದಲ್ಲಿ ನಡೆದ ಸ್ಪರ್ಧೆಯ ಉಧ್ಘಾಟನಾ ಸಮಾರಂಭದಲ್ಲಿ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಸೂರ್ಯ ಕುಮಾರ್, ದೇವಸ್ಥಾನದ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಘು ಕೆ.ದೇವಾಡಿಗ, ಶ್ರೀ ವಿದ್ಯಾವಿನಾಯಕ ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ.ಜಿ., ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಧ್ಯಕ್ಷರಾದ ಸುಧಾಕರ ಆರ್.ಅಮೀನ್, ಸಲಹಾ ಸಮಿತಿಯ ಅಧ್ಯಕ್ಷರಾದ ಮೋಹನ್ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಕಡೆಗಳಿಂದ 32 ಮಂದಿ ಸ್ಪರ್ಧಾಳುಗಳು ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಯುವತಿ ಮಂಡಲದ ಕೋಶಾಧಿಕಾರಿ ಕುಮಾರಿ ನಿರ್ಮಿತರವರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಸಮಾರಂಭದಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷರಾದ ಸುಧಾಕರ ಆರ್. ಅಮೀನ್ ಸ್ವಾಗತಿಸಿ,
ಯುವಕ ಮಂಡಲದ ಅಧ್ಯಕ್ಷರಾದ ನಾಗೇಶ್ ಟಿ. ಜಿ. ವಂದಿಸಿದರು. ಸುವರ್ಣ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ರಾಮದಾಸ್ ಪಾವಂಜೆ ಕಾರ್ಯಕ್ರಮ ನಿರೂಪಿಸಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…