ಜನ ಮನದ ನಾಡಿ ಮಿಡಿತ

Advertisement

ಮಹಿಳೆಯ ಚಿನ್ನದ ಸರ ಎಳೆದುಕೊಂಡು ಪರಾರಿ; ಅಪರಿಚಿತ ಅಲೆಮಾರಿ ಮಹಿಳೆಯರಿಂದ ಕೃತ್ಯ


ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊ0ದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಡೆದಿದೆ.


ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಎಂಬವರು ಚಿನ್ನದ ಸರ ಕಳಕೊಂಡ ಮಹಿಳೆ. ಸುಂದರಿ ಅವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣದಲ್ಲಿ ಗಾಂಧೀಕಟ್ಟೆ ಪಕ್ಕದಲ್ಲಿರುವ ಬೇಕರಿಯೊಂದರಿAದ ತಿಂಡಿಗಳನ್ನು ಖರೀದಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ನಾಲ್ವರು ಅಲೆಮಾರಿ ಮಹಿಳೆಯರ ತಂಡವು ಏಕಾಏಕಿ ಅವರನ್ನು ಸುತ್ತುವರಿದು, ಅವರ ಕುತ್ತಿಗೆಯಲ್ಲಿದ್ದ ಸುಮಾರು ಮೂವರು ಪವನ್ ತೂಕರದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದೆ


ತನ್ನ ಸರವನ್ನು ಕಳಕೊಂಡ ಸುಂದರಿ ಅವರು ಈ ವಿಚಾರವನ್ನು ನಗರದ ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸೊಬ್ಬರಿಗೆ ತಿಳಿಸಿದ್ದು, ಬಳಿಕ ಪುತ್ತೂರು ನಗರ ಠಾಣೆಗೆ ತೆರಳಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!