ಪುತ್ತೂರು: ನಾಲ್ವರು ಅಲೆಮಾರಿ ಮಹಿಳೆಯರ ತಂಡವೊ0ದು ಮಹಿಳೆಯೋರ್ವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡು ಪರಾರಿಯಾದ ಘಟನೆ ಶನಿವಾರ ಸಂಜೆ ಪುತ್ತೂರು ನಗರದ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣದ ಸಮೀಪದ ಗಾಂಧೀಕಟ್ಟೆ ಬಳಿಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಕನ್ಯಾನ ಸಮೀಪದ ನಂದರಬೆಟ್ಟು ನಿವಾಸಿ ಸುಂದರಿ ಎಂಬವರು ಚಿನ್ನದ ಸರ ಕಳಕೊಂಡ ಮಹಿಳೆ. ಸುಂದರಿ ಅವರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣದಲ್ಲಿ ಗಾಂಧೀಕಟ್ಟೆ ಪಕ್ಕದಲ್ಲಿರುವ ಬೇಕರಿಯೊಂದರಿAದ ತಿಂಡಿಗಳನ್ನು ಖರೀದಿಸಿ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ನಾಲ್ವರು ಅಲೆಮಾರಿ ಮಹಿಳೆಯರ ತಂಡವು ಏಕಾಏಕಿ ಅವರನ್ನು ಸುತ್ತುವರಿದು, ಅವರ ಕುತ್ತಿಗೆಯಲ್ಲಿದ್ದ ಸುಮಾರು ಮೂವರು ಪವನ್ ತೂಕರದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದೆ
ತನ್ನ ಸರವನ್ನು ಕಳಕೊಂಡ ಸುಂದರಿ ಅವರು ಈ ವಿಚಾರವನ್ನು ನಗರದ ಜಂಕ್ಷನ್‌ನಲ್ಲಿ ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸೊಬ್ಬರಿಗೆ ತಿಳಿಸಿದ್ದು, ಬಳಿಕ ಪುತ್ತೂರು ನಗರ ಠಾಣೆಗೆ ತೆರಳಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…