ಉಡುಪಿ: ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಮಾಜಿ ಕಾರ್ಪೊರೇಟರ್ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಬಿಜೆಪಿ ಕಚೇರಿಯ ಮುಂಭಾಗದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕೆಲಸ ಮಾಡುವುದನ್ನು ಬಿಟ್ಟು ಭ್ರಷ್ಟಾಚಾರದಲ್ಲಿ ತೊಡಗಿದೆ. ಭ್ರಷ್ಟಾಚಾರದಲ್ಲಿ ಸಂಗ್ರಹಿಸಿದ ಹಣವನ್ನು ಪಂಚರಾಜ್ಯಗಳ ಚುನಾವಣೆಗೆ ಬಳಸಲು ಉದ್ದೇಶಿಸಿತ್ತು ಎಂಬ ಸುದ್ದಿ ಹರಿದಾಡುತ್ತಿದೆ.
ಇದಕ್ಕೆ ಕಾಂಗ್ರೆಸ್ ಕೂಡಲೇ ಸ್ಪಷ್ಟೀಕರಣ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯಕುಮಾರ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್, ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ರವಿ ಅಮೀನ್, ಅಂಡಾರು ದೇವಿಪ್ರಸಾದ್ ಶೆಟ್ಟಿ, ಮಂಜುನಾಥ್ ಮಣಿಪಾಲ್, ದಾವೂದ್ ಅಬುಬಕ್ಕರ್, ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…