ಜನ ಮನದ ನಾಡಿ ಮಿಡಿತ

Advertisement

ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ


ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ”ಕ್ಕೆ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತಿಯಲ್ಲಿ ಚಾಲನೆ ನೀಡಲಾಯಿತು.


ತಾಲೂಕು ಐಇಸಿ ಸಂಯೋಜಕ ರಾಜೇಶ್‌ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅಡಿಕೆ ಕೃಷಿ, ಎಡೆಸಸಿ, ಮಲ್ಲಿಗೆ, ಪೌಷ್ಟಿಕ ತೋಟ, ತೆರೆದಬಾವಿ, ದನದ ಹಟ್ಟಿ, ಕೃಷಿ ಹೊಂಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅ.31ರೊಳಗೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು. ಗ್ರಾಮೀಣ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಕುಟುಂಬಗಳು ಉದ್ಯೋಗ ಚೀಟಿಗೆ ಗ್ರಾಮ ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು


ಗ್ರಾಮದಲ್ಲಿ ವಾಹನ ಪ್ರಚಾರ ನಡೆಸಲಾಯಿತು. ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ನೀಡಲಾಯಿತು. ಗ್ರಾಮ ಪಂಚಾಯತ್‌ ಅಧ್ಯಕ್ಷೆ ನಳಿನಿ ಪ್ರಸಾದ್‌, ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಗೀತಾ ಹೆಗ್ಡೆ, ಗ್ರಾಮ ಪಂಚಾಯತ್‌ ಸಿಬ್ಬಂದಿ ಇತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!