ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ “ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ”ಕ್ಕೆ ತಾಲೂಕಿನ ಪಂಜಿಕಲ್ಲು ಗ್ರಾಮ ಪಂಚಾಯತಿಯಲ್ಲಿ ಚಾಲನೆ ನೀಡಲಾಯಿತು.
ತಾಲೂಕು ಐಇಸಿ ಸಂಯೋಜಕ ರಾಜೇಶ್ ಮಾತನಾಡಿ, ಉದ್ಯೋಗ ಖಾತರಿ ಯೋಜನೆಯಡಿ ಅಡಿಕೆ ಕೃಷಿ, ಎಡೆಸಸಿ, ಮಲ್ಲಿಗೆ, ಪೌಷ್ಟಿಕ ತೋಟ, ತೆರೆದಬಾವಿ, ದನದ ಹಟ್ಟಿ, ಕೃಷಿ ಹೊಂಡ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. 2024-25ನೇ ಸಾಲಿನ ಕ್ರಿಯಾಯೋಜನೆ ತಯಾರಿ ಹಿನ್ನೆಲೆಯಲ್ಲಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಅ.31ರೊಳಗೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಬೇಕು. ಗ್ರಾಮೀಣ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅರ್ಹ ಕುಟುಂಬಗಳು ಉದ್ಯೋಗ ಚೀಟಿಗೆ ಗ್ರಾಮ ಪಂಚಾಯಿತಿಯಲ್ಲಿ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು
ಗ್ರಾಮದಲ್ಲಿ ವಾಹನ ಪ್ರಚಾರ ನಡೆಸಲಾಯಿತು. ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ನೀಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ನಳಿನಿ ಪ್ರಸಾದ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಹೆಗ್ಡೆ, ಗ್ರಾಮ ಪಂಚಾಯತ್ ಸಿಬ್ಬಂದಿ ಇತರರು ಉಪಸ್ಥಿತರಿದ್ದರು
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…