ಬಂಟ್ವಾಳ : ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ಪಂಚ ಕಟ್ಟೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಕದಿರು ಉತ್ಸವ ಕಾರ್ಯಕ್ರಮ ಸೋಮವಾರ ವಿಜೃಂಭಣೆಯಿಂದ ನಡೆಯಿತು.

ಕ್ಷೇತ್ರದ ಪ್ರ.ಅರ್ಚಕ ವಾಸುದೇವ ಭಟ್ ಅವರ ಪೌರೋಹಿತ್ಯದಲ್ಲಿ ತೆನೆ ಪೂಜೆ ನಡೆಯಿತು. ಬಳಿಕ ಗ್ರಾಮಸ್ಥರಿಗೆ ತೆನೆ ವಿತರಿಸಲಾಯಿತು. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು.

ಆಡಳಿತ ಸಮಿತಿ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಮುಗೆರೋಡಿ ಮತ್ತು ಸಮಿತಿ ಸದಸ್ಯರು, ಮಾತೃ ಸಂಘದ ಪದಾಧಿಕಾರಿಗಳು, ಸದಸ್ಯರು, ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.



