ಬಂಟ್ವಾಳ ; ಬಂಟ್ವಾಳ ಪುರಸಭಾ ವ್ಯಾಪ್ತಿಯ ಗೂಡಿನಬಳಿ 13 ಮತ್ತು 14ನೇ ವಾರ್ಡಿಗೆ ಮೀಸಲಿಟ್ಟ ಅನುದಾನದಲ್ಲಿ ಪುರಸಭೆ ಅಧಿಕಾರಿಗಳು ತಾರತಮ್ಯ ಮಾಡಿರುವ ಬಗ್ಗೆ ಬಂಟ್ವಾಳ ಪುರಸಭೆಗೆ ಎಸ್ ಡಿ ಪಿ ಐ ಪುರಸಭಾ ಸದಸ್ಯರುಗಳಾದ ಝೀನತ್ ಹಾಗೂ ಸಂಶಾದ್‌ರ ನೇತೃತ್ವದಲ್ಲಿ ಪಕ್ಷದ ನಾಯಕರೊಂದಿಗೆ ನಿಯೋಗವು ಧರಣಿ ನಡೆಸಲು ಸಿದ್ಧತೆ ನಡೆಸಿತ್ತು.
ಪುರಸಭಾ ಸದಸ್ಯರಿಗಾದ ತಾರತಮ್ಯಕ್ಕೆ ವಿಷಾದ ವ್ಯಕ್ತಪಡಿಸಿದ ಮುಖ್ಯಾಧಿಕಾರಿ ಮತ್ತು ಇಂಜಿನಿಯರ್ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ವಾರ್ಡ್ ಅಭಿವೃದ್ಧಿಗೆ ಅನುದಾನ ಒದಗಿಸುವುದಾಗಿ ಮತ್ತು ಗುಡ್ಡೆಜರಿತ ತಡೆಯಲು ತಡೆಗೋಡೆ ನಿರ್ಮಿಸುವುದಾಗಿ ಭರವಸೆ ನೀಡಿದ ಬಳಿಕ ಧರಣಿ ಕೈ ಬಿಡಲಾಯಿತು.
ಈ ಸಂದರ್ಭದಲ್ಲಿ ಪುರಸಭಾ ಸದಸ್ಯರುಗಳಾದ ಮೂನಿಷ್ ಆಲಿ, ಇದ್ರೀಸ್ ಪಿಜೆ, ಮಾಜಿ ಪುರಸಭಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂಆರ್, ಎಸ್‌ಡಿಪಿಐ ಕ್ಷೇತ್ರ ಸಮಿತಿ ಜೊತೆ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಸಮಿತಿ ಸದಸ್ಯರಾದ ಶಾಹುಲ್ ಎಸ್ ಎಚ್, ಪುರಸಭಾ ಸಮಿತಿ ಸದಸ್ಯರಾದ ಅನ್ಸಾರ್ ಗೂಡಿನಬಳಿ, ಬೂತ್ ಅಧ್ಯಕ್ಷರುಗಳಾದ ಅನ್ವರ್ ಹಾಗೂ ನಿಸಾರ್, ಕಾರ್ಯದರ್ಶಿ ಫಿರೋಜ್ ಹಾಗೂ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರ ವಿತರಣೆಗೆ ಸಂಬಂಧಿಸಿದ ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು ಎಂದು…
ಯಾವುದೇ ಮುನ್ಸೂಚನೆ ನೀಡದೆ ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ಎಚ್‌ಪಿಸಿಎಲ್‌ನ ಮಹಿಳಾ ಗುತ್ತಿಗೆ ಕಾರ್ಮಿಕರು ಕಳೆದ ಒಂದು ತಿಂಗಳು ಏಳು ದಿನಗಳಿಂದ…
ಕರ್ತವ್ಯನಿರತ ಟಿಟಿಇಯ ಸಮಯಪ್ರಜ್ಞೆ ಹಾಗೂ ಎಚ್ಚರಿಕೆಯಿಂದ ರೈಲು ಪ್ರಯಾಣಿಕರೊಬ್ಬರ ಕಾಣೆಯಾಗಿದ್ದ ಲ್ಯಾಪ್‌ಟಾಪ್ ಬ್ಯಾಗ್ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ…
ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿ ಕಾಮಗಾರಿಗಳಿಗೆ ವೇಗ ದೊರಕಿದ್ದು, ಮುಂದಿನ 15 ವರ್ಷಗಳ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು…
ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಸರ್ಕಾರ ಮೂರುವರೆ ವರ್ಷ ಕಳೆದರೂ ಬಡವರಿಗೆ ಮನೆ, ನಿವೇಶನ ಕಲ್ಪಿಸಿಲ್ಲ. ಬೆಳೆ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಸೇರಿದಂತೆ ವಿವಿಧ ಬೆಳೆಗಳಿಗೆ ಹವಾಮಾನ ಆಧರಿತ ಬೆಳೆ ವಿಮೆ ಪರಿಹಾರ ನಿರೀಕ್ಷಿತ ಪ್ರಮಾಣಕ್ಕಿಂತ ಕಡಿಮೆಯಾಗಿರುವ…