ಬಂಟ್ವಾಳ: ಬೆಂಗಳೂರಿನಲ್ಲಿ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ರೂ ಹಣ ಪತ್ತೆಯಾದ ಪ್ರಕರಣವನ್ನು ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ವತಿಯಿಂದ ಬಿ.ಸಿ.ರೋಡಿನಲ್ಲಿ ಸೋಮವಾರ ಬೆಳಗ್ಗೆ ಪ್ರತಿಭಟನೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಳೆದ ಬಾರಿ ಚುನಾವಣಾ ಪ್ರಚಾರದ ಸಂದರ್ಭ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಹೇಳಿದ ಮಾತನ್ನು ನೆನಪಿಸಿ, ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದರೆ, ಕರ್ನಾಟಕವನ್ನು ಎಟಿಎಂ ಮಾಡುತ್ತದೆ ಎಂಬುದು ಈಗ ಸಾಬೀತಾಗುತ್ತಿದೆ. ಭ್ರಷ್ಟಾಚಾರದ ಮೂಲಕ ಅಧಿಕಾರ ನಡೆಸುತ್ತಿರುವುದು ಈ ಪ್ರಕರಣದ ಮೂಲಕ ಬೆಳಕಿಗೆ ಬರುತ್ತಿದ್ದು, ಇದನ್ನು ಜನರು ಗಮನಿಸುತ್ತಿದ್ದು, ಮುಂದೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ ಮಾತನಾಡಿ, ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಕೂಡಲೇ ಜಾರಿ ಮಾಡುತ್ತೇನೆ ಎಂದಿದ್ದ ಉಚಿತ ಸ್ಕೀಮುಗಳಿಂದ ಈಗ ರಾಜ್ಯ ದಿವಾಳಿಯಾಗುವ ಅಂಚಿನಲ್ಲಿದ್ದು, ಇದೀಗ ಗುತ್ತಿಗೆದಾರನ ಮನೆಯಲ್ಲಿ ಹಣ ಸಿಕ್ಕಿರುವುದು ಭ್ರಷ್ಟಾಚಾರ ಇದೆ ಎಂಬುದನ್ನು ಸಾಬೀತುಪಡಿಸಿದೆ. ಬಿಜೆಪಿ ಸರಕಾರವಿದ್ದಾಗ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದ ಕಾಂಗ್ರೆಸ್ ಗೆ ಅದನ್ನು ಸಾಬೀತುಪಡಿಸಲು ಆಗಿರಲಿಲ್ಲ. ಆದರೆ ಈಗ ಗುತ್ತಿಗೆದಾರನ ಮನೆಯಲ್ಲಿ ಕೋಟಿಗಟ್ಟಲೆ ಹಣ ಸಿಕ್ಕಿರುವುದು ಅಧಿಕಾರಸ್ಥರು ಇದರಲ್ಲಿ ಶಾಮೀಲಾಗಿರಬಹುದು ಎಂಬ ಶಂಕೆಯನ್ನು ಮೂಡಿಸುತ್ತಿದ್ದು, ಸರಿಯಾದ ತನಿಖೆ ಅವಶ್ಯ ಎಂದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ರಾಜ್ಯ ನಾಯಕಿ ಸುಲೋಚನಾ ಜಿ.ಕೆ.ಭಟ್, ಜಿಪಂ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಬುಡಾ ಮಾಜಿ ಅಧ್ಯಕ್ಷ ದೇವದಾಸ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ ಸಹಿತ ವಿವಿಧ ಮೋರ್ಚಾಗಳ ಪ್ರಮುಖರು, ಪುರಸಭೆ ಸದಸ್ಯರು, ಪಕ್ಷ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ ಅರಳ ಕಾರ್ಯಕ್ರಮ ನಿರ್ವಹಿಸಿದರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…