ಮುಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಿ ಉದ್ಯಮಿ ನಾಡೋಜ ಡಾ. ಜಿ ಶಂಕರ್ ಮಾತನಾಡಿ ನವರಾತ್ರಿಯ ಪರ್ವಕಾಲದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಹಾಗೂ ಲೋಕಕಲ್ಯಾಣ ಸಾಧ್ಯ ಎಂದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪಾವಂಜೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೂರ್ಯ ಕುಮಾರ್, ಬಪ್ಪನಾಡು ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಅರ್ಚಕ ನರಸಿಂಹ ಭಟ್, ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಪ್ರಸಾದ್ ಭಟ್, ಮತ್ತಿತರರು ಉಪಸ್ಥಿತರಿದ್ದರು.
ಲಕ್ಷ್ಮಿಕಾಂತ್ ನಿರೂಪಿಸಿದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಮಂಗಳೂರಿನ ಉರ್ವದ ನಾಟ್ಯಾರಾಧನೆ ಕಲಾಕೇಂದ್ರ ನಿರ್ದೇಶಕಿ ಸುಮಂಗಳ ರತ್ನಾಕರರಾವ್ ರವರ ಶಿಷ್ಯೆಯರಿಂದ
ಭರತನಾಟ್ಯ ಹಾಗೂ ಜಾನಪದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.



