ಮುಲ್ಕಿ: ಇಲ್ಲಿಗೆ ಸಮೀಪದ ಕೊಲಕಾಡಿ ಕುಂಜಾರಗಿರಿ ಶಾಸ್ತವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಕ್ಕಾಗಿ ಸಾಮೂಹಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ, ವಿಜೃಂಭಣೆಯಿಂದ ನಡೆಯಿತು.

ಸಂಜೆ 5:00 ಗಂಟೆಗೆ ಕೊಲಕಾಡಿ ವೇ.ಮೂ. ವಾದಿರಾಜ ಉಪಾಧ್ಯಾಯ ಹಾಗೂ ಶ್ರೀಕಾಂತ್ ಭಟ್ ಪೌರೋಹಿತ್ಯದಲ್ಲಿ ವಿಶೇಷ ಪ್ರಾರ್ಥನೆ ನಡೆದು ಶ್ರೀ ದುರ್ಗಾ ನಮಸ್ಕಾರ ಪೂಜೆಗೆ ಚಾಲನೆ ನೀಡಲಾಯಿತು.
ರಾತ್ರಿ 8 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.



