ಜನ ಮನದ ನಾಡಿ ಮಿಡಿತ

Advertisement

ನರೇಗಾ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮ

ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಉದ್ಯೋಗ ಖಾತರಿ‌ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮಕ್ಕೆ ಅ. 13 ರಂದು ಅಳಿಯೂರು ಹೈಸ್ಕೂಲ್ ಬಳಿ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಚಾಲನೆ ನೀಡಿದರು.

ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಬಳಿ ಸೇರಿರುವ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಒಂದು ಸದಾವಕಾಶ, ಕ್ರಿಯಾಯೋಜನೆ ತಯಾರಿ ಕೆಲಸ ನಡೆಯುತ್ತಿದ್ದು, ಕೂಡಲೇ ಅರ್ಜಿ ಸಲ್ಲಿಸಿ ಎಂದು ತಾಲೂಕು ಐಇಸಿ ಸಂಯೋಜಕಿಯವರಾದ ಅನ್ವಯ ಮಾಹಿತಿ ನೀಡಿದರು.

ಮನೆಯಲ್ಲಿ ದಿನನಿತ್ಯದ ಚಟುವಟಿಕೆಗಳಿಂದ ಬರುವ ಕೊಳಚೆ ನೀರನ್ನು ಇಂಗಿಸಲು ನರೇಗಾ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ ಮಾಡಿಸಿಕೊಳ್ಳಿ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಗ್ಗಪ್ಪ ಮೂಲ್ಯ ಅವರು ಸಲಹೆ ನೀಡಿದರು.

ಬಳಿಕ ಮನೆ – ಮನೆ ಭೇಟಿ ನೀಡಿ‌ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಮಾಹಿತಿಯನ್ನು ಒಳಗೊಂಡ ಕರಪತ್ರವನ್ನು ಹಂಚಲಾಯಿತು.

ಸ್ವಚ್ಚತಾ ವಾಹನದಲ್ಲಿ ಧ್ವನಿ ವರ್ಧಕದ ಮೂಲಕ ಗ್ರಾಮದ ಪ್ರತಿ‌ ವಾರ್ಡಿನಲ್ಲಿ ಮಾಹಿತಿ ಪ್ರಚಾರ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಶೇಖರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಪ್ರಿಯಾ, ಸಂದೀಪ್ , ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!