ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 2024-25 ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುವ ಉದ್ದೇಶದಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಹಾಗೂ ಮನೆ ಮನೆ ಜಾಥಾ ಕಾರ್ಯಕ್ರಮಕ್ಕೆ ಅ. 13 ರಂದು ಅಳಿಯೂರು ಹೈಸ್ಕೂಲ್ ಬಳಿ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಚಾಲನೆ ನೀಡಿದರು.
ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಬಳಿ ಸೇರಿರುವ ಜನರಿಗೆ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕಾಮಗಾರಿ ಅನುಷ್ಠಾನಕ್ಕೆ ಒಂದು ಸದಾವಕಾಶ, ಕ್ರಿಯಾಯೋಜನೆ ತಯಾರಿ ಕೆಲಸ ನಡೆಯುತ್ತಿದ್ದು, ಕೂಡಲೇ ಅರ್ಜಿ ಸಲ್ಲಿಸಿ ಎಂದು ತಾಲೂಕು ಐಇಸಿ ಸಂಯೋಜಕಿಯವರಾದ ಅನ್ವಯ ಮಾಹಿತಿ ನೀಡಿದರು.
ಮನೆಯಲ್ಲಿ ದಿನನಿತ್ಯದ ಚಟುವಟಿಕೆಗಳಿಂದ ಬರುವ ಕೊಳಚೆ ನೀರನ್ನು ಇಂಗಿಸಲು ನರೇಗಾ ಯೋಜನೆಯಡಿಯಲ್ಲಿ ಬಚ್ಚಲು ಗುಂಡಿ ಮಾಡಿಸಿಕೊಳ್ಳಿ ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಉಗ್ಗಪ್ಪ ಮೂಲ್ಯ ಅವರು ಸಲಹೆ ನೀಡಿದರು.
ಬಳಿಕ ಮನೆ – ಮನೆ ಭೇಟಿ ನೀಡಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿ ಮಾಹಿತಿಯನ್ನು ಒಳಗೊಂಡ ಕರಪತ್ರವನ್ನು ಹಂಚಲಾಯಿತು.
ಸ್ವಚ್ಚತಾ ವಾಹನದಲ್ಲಿ ಧ್ವನಿ ವರ್ಧಕದ ಮೂಲಕ ಗ್ರಾಮದ ಪ್ರತಿ ವಾರ್ಡಿನಲ್ಲಿ ಮಾಹಿತಿ ಪ್ರಚಾರ ಕೈಗೊಳ್ಳಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಪಂಚಾಯತ್ ಕಾರ್ಯದರ್ಶಿ ಶೇಖರ್, ಗ್ರಾಮ ಪಂಚಾಯತಿ ಸಿಬ್ಬಂದಿಗಳಾದ ಪ್ರಿಯಾ, ಸಂದೀಪ್ , ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…