ಮುಂಬರುವ ನೈರುತ್ಯ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯ ಪೂರ್ವಭಾವಿಯಾಗಿ ಮೂಡುಬಿದಿರೆ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷದ್ ಸದಸ್ಯರು ಹಾಗೂ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಮೋನಪ್ಪ ಭಂಡಾರಿಯವರು ಮಾಹಿತಿ ನೀಡಿದರು. ಜೊತೆಗೆ ಮಂಡಲಾಧ್ಯಕ್ಷರಾದ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ ಹಾಗೂ ಕೇಶವ ಕರ್ಕೇರ, ನೈರುತ್ಯ ಪದವೀಧರ ಕ್ಷೇತ್ರದ ಸೇರ್ಪಡೆ ಅಭಿಯಾನದ ಸಂಚಾಲಕರಾದ ಜಯಂತ್ ತೋಕೂರು ಸೇರಿದಂತೆ ಪಕ್ಷದ ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು



