ಹಳೆಯಂಗಡಿ : ಪ್ರತಿಯೊಂದು ಚರ್ಚ್ ಗಳು ಆಯೋಜಿಸುತ್ತಿರುವ ಪಂದ್ಯಾಟಗಳು ಸಭೆಯ ಹಾಗೂ ಕುಟುಂಬಗಳ ಅನ್ಯೋನ್ಯತೆಗೆ ಪೂರಕವಾಗಿ ಇದ್ದು, ಸಭೆಗಳಲ್ಲಿ ಉತ್ತಮ ವಾತಾವರಣವನ್ನು ಸೃಷ್ಟಿ ಮಾಡಲು ಕಾರಣವಾಗಿದೆ ಎಂದು ಮಂಗಳೂರಿನ ಅಥೇನ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಆದ ಡಾ. ಅಶಿತ್ ಶೆಟ್ಟಿಯನ್ ನುಡಿದರು.
ಅವರು ಹಳೆಯಂಗಡಿ ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ನಡೆದ ಸುಗ್ಗಿ ಹಬ್ಬದ ಪಂದ್ಯಾಟದ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚಿನ ಸಭಾ ಪಾಲಕರಾದ ರೆವೆರೆಂಡ್ ಅಮೃತ್ ರಾಜ್ ಖೊಡೆ ರವರು ವಹಿಸಿ ಶುಭ ಹಾರೈಸಿದರು.
ಸಿಎಸ್ಐ ಕ್ರಿಸ್ತ ಕಾಂತಿ ಚರ್ಚ್ ಪಣಂಬೂರು ಇಲ್ಲಿಯ ಸಭಾ ಪಾಲಕರಾದ ರೆವೆರೆಂಡ್ ಸಂಧ್ಯಾ ಖೊಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಭಾ ಪರಿಪಾಲನ ಸಮಿತಿಯ ಸದಸ್ಯರಾದ ಆಸ್ಟಿನ್ ಕರ್ಕಡ, ವಸಂತ ಬೆರ್ನಾಡ್,
ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಜೇಮ್ಸ್ ಕರ್ಕಡ, ಮತ್ತು ಸಿಡ್ನಿ ಕರ್ಕಡ ಉಪಸ್ಥಿರಿದ್ದರು.
ಪಂದ್ಯಾಟ ಸಮಿತಿಯ ಕಾರ್ಯದರ್ಶಿ ರೆಮ್ಮಿ ಎಲಿಸಾ ಸಾಮುವೆಲ್, ಸ್ವಾಗತಿಸಿ ಖಜಾಂಜಿ ಸುಹಾನ್ ಪಾಲನ್ನ ವಂದಿಸಿದರು. ಅಡ್ಲಿನ್ ನವ್ಯ ಪಾಲನ್ನ ಕಾರ್ಯಕ್ರಮ ನಿರೂಪಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…