ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯ ವೇಳೆ ಕಾಂಗ್ರೆಸ್ ಬೆಂಬಲಿತ ಗುತ್ತಿಗೆದಾರನ ಮನೆಯಲ್ಲಿ 42 ಕೋಟಿ ಅಕ್ರಮ ಹಣ ಪತ್ತೆಯಾಗಿದ್ದು, ಇದನ್ನು ಖಂಡಿಸಿ ಹಾಗೂ ರಾಜ್ಯ ಕಾಂಗ್ರೆಸ್ ಸರಕಾರದ ಪೊಳ್ಳು ಭರವಸೆ ನೀಡಿ ಹಾದಿ ತಪ್ಪಿಸುವ ನೀತಿಯನ್ನು ವಿರೋಧಿಸಿ ಇಂದು ಬಿಜೆಪಿ ಮೂಲ್ಕಿ – ಮೂಡುಬಿದಿರೆ ಮಂಡಲ ಬಿಜೆಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶಾಸಕರಾದ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿದರು.
ಕರ್ನಾಟಕವನ್ನು ಏಟಿಎಂ ಆಗಿ ಮಾಡಿಕೊಂಡಿರುವ ಕಾಂಗ್ರೆಸ್ ಹೈಕಮಂಡ್ ಈ ಹಣವನ್ನು ತೆಲಂಗಾಣದ ಚುನಾವಣೆಗೆ ಈ ಹಣ ಬಳಸಲು ಉದ್ದೇಶಿಸಲಾಗಿತ್ತು ಎಂಬ ಸುದ್ದಿಗೆ ಕಾಂಗ್ರೆಸ್ ಸ್ಪಷ್ಟೀಕರಣ ನೀಡಬೇಕು ಹಾಗೂ ಇಂತಹ ಭ್ರಷ್ಟ ಆಡಳಿತ ನೀಡುತ್ತಿರುವ ಸಿಎಂ ಮತ್ತು ಡಿಸಿಎಂ ಇಬ್ಬರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಅಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀ ಸುನಿಲ್ ಆಳ್ವ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಸ್ತೂರಿ ಪಂಜ, ಜಿಲ್ಲಾ ಉಪಾಧ್ಯಕ್ಷರಾದ ಈಶ್ವರ್ ಕಟೀಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ್ ಶೆಟ್ಟಿಗಾರ್ ಮತ್ತು ಕೇಶವ ಕರ್ಕೇರ ಸೇರಿದಂತೆ ಪ್ರಮುಖರು ಮುಖಂಡರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…