“ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದರ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ದಶಂಬರ್ ಮೊದಲ ವಾರದಲ್ಲಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆ ಕಡೇಶ್ವಾಲ್ಯದ ಸಹಭಾಗಿತ್ವದಲ್ಲಿ ನೆರವೇರಲಿದ್ದು, ಬಂಟ್ವಾಳ ತಾಲೂಕಿನಲ್ಲಿ 18ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ , ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸಿರಿ.
ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು. ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಪಟ್ಟಿ ಮಾಡಿ ಕಳುಹಿಸಿರಿ. ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು. ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಕೆಳಗಿನ ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿರುವರು.
ಅಧ್ಯಕ್ಷರು. “ಮಕ್ಕಳ ಕಲಾ ಲೋಕ” -ಸ್ಕಂದ- ಅಳಕೆ ಮಜಲು 574243. ಮೊ: 9448626093
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…