ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ಮಹತ್ವಕಾಂಕ್ಷಿ ಕಾರ್ಯಕ್ರಮವಾದ ವಿಶ್ವ ಬಂಟರ ಸಮ್ಮೇಳನ 2023 ಕಾರ್ಯಕ್ರಮವು ಅಕ್ಟೋಬರ್ ದಿನಾಂಕ 28 ಮತ್ತು 29ರಂದು ಉಡುಪಿಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಐಕಳ ಹರೀಶ್ ಶೆಟ್ಟಿ ಯವರ ವಿಶೇಷ ಕೋರಿಕೆಗೆ ಸ್ಪಂದಿಸಿ ಕರ್ನಾಟಕದ ಮುಖ್ಯ ಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯನವರು 28.10.2023ರಂದು ಉಡುಪಿಗೆ ಆಗಮಿಸಿ ವಿಶ್ವ ಬಂಟರ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಲು ಒಪ್ಪಿಗೆಯನ್ನು ಸೂಚಿಸಿದ್ದಾರೆ.

ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಇಂದು ಮುಖತಾ ಭೇಟಿ ನೀಡಿ ಆತ್ಮೀಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರಕಾರದ ಮಾಜಿ ಸಚಿವರಾದ ರಮಾನಾಥ ರೈ ಹಾಗೂ ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಉಪಸ್ಥಿತರಿದ್ದರು.



