ಜನ ಮನದ ನಾಡಿ ಮಿಡಿತ

Advertisement

ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ.


‌ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ.


ಚೀಟಿ ಬರೆದು ಆತ್ಮಹತ್ಯೆ‌‌ ಕಡೇಶಿವಾಲಯ ಗ್ರಾಮದ ನೆಲ್ಲಿ ಗುಡ್ಡೆ ನಿವಾಸಿ ದಿ.ಸುಂದರ ಎಂಬವರ ಮಗ ಸಚಿನ್ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.


ಸಚಿನ್ ಬಂಟ್ವಾಳದ ಲೆವಿನ್ ಇಲೆಕ್ಟ್ರಿಕಲ್ ಕಂಪೆನಿಯಲ್ಲಿ ಇಲೆಕ್ಟ್ರೀಷಿಯನ್ ಆಗಿ ಕೆಲಸ ಮಾಡುತ್ತಿದ್ದ. ಅ.18 ರಂದು ಕೆಲಸಕ್ಕೆ ಹೋದವನು ರಾತ್ರಿಯಾದರೂ ಮನೆಗೆ ಬರದ ಹಿನ್ನೆಲೆಯಲ್ಲಿ ಈತನನ್ನು ಹುಡುಕಲು ಶುರು ಮಾಡಿದ್ದರು.
ಪೋನ್ ಮಾಡಿದಾಗ ರಿಂಗ್ ಆಗುತ್ತಿತ್ತು ವಿನಹ ರಿಸೀವ್ ಮಾಡದ ಇರುವಾಗ ಬಂಟ್ವಾಳದ ಕಾಮಾಜೆ ಮಾವನ ಮನೆಯರವಲ್ಲಿ ವಿಚಾರಿಸಿದ್ದಾರೆ. ಅವರು ಹುಡುಕಿದಾಗ ಮುಂಜಾನೆ ಸುಮಾರು 3 ಗಂಟೆಯ ವೇಳೆ ಈತನ ಸ್ಕೂಟರ್ ಬಿ.ಮೂಡ ಗ್ರಾಮದ ಮಿತ್ತಕೋಡಿ ಎಂಬಲ್ಲಿರುವ ಮೈದಾನದ ಬಳಿ ನಿಲ್ಲಿಸಲಾಗಿತ್ತು.
ಆದರೆ ಸಚಿನ್ ಅಲ್ಲಿ ಕಾಣದ ಹಿನ್ನೆಲೆಯಲ್ಲಿ ಪೋನ್ ಮಾಡಿದಾಗ ಅಲ್ಲೇ ಸಮೀಪದ ಗುಡ್ಡವೊಂದರಲ್ಲಿ ಪೋನ್ ರಿಂಗು ಕೇಳುತ್ತಿತ್ತು ಎಂದು ಹೋಗಿ ನೋಡಿದಾಗ ಆತ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.


ಆತ್ಮಹತ್ಯೆ ಮಾಡುವ ಮೊದಲು ಈತ ಚೀಟಿಯನ್ನು ಬರೆದು ಕಿಸೆಯಲ್ಲಿಟ್ಟಿದ್ದು, ಇದೀಗ ಚೀಟಿ ಪೋಲೀಸರ ಕೈ ಸೇರಿದೆ. ಪ್ರೇಮ ವೈಫಲ್ಯ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಈತ ಚೀಟಿಯಲ್ಲಿ ಬರೆದಿದ್ದ ಎಂದು ಹೇಳಲಾಗಿದ್ದು,ಮರಣೋತ್ತರ ಪರೀಕ್ಷಾ ವರದಿಯ ಬಳಿಕ ಪೋಲೀಸ್ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ.
ನಗರ ಠಾಣಾ ಇನ್ಸ್ ಪೆಕ್ಟರ್ ಆನಂತ ಪದ್ಮನಾಭ ಮತ್ತು ಎಸ್. ಐ.ರಾಮಕೃಷ್ಣ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!