ವಿಟ್ಲ : ರಜಾ ಹಿನ್ನೆಲೆ ಬೀಚ್ ಗೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದು, ವಿಟ್ಲ ಮೂಲದ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ಬೀಚ್ ನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ನಿಶಾ ಎಂದು ಗುರುತಿಸಲಾಗಿದ್ದು, ಈಕೆ ಮೂಲತಃ ನೇಪಾಲ ನಿವಾಸಿಯಾಗಿದ್ದು, ಪ್ರಸ್ತುತ ವಿಟ್ಲದಲ್ಲಿ ವಾಸವಾಗಿದ್ದಾಳೆ.
ವಿಟ್ಲ ಮೂಲದ ದಿಗಂತ (15) ದಿವ್ಯರಾಜ್ (15) ತೇಜಸ್ (14) ಕೀರ್ತನ್ (16) ಅಶ್ಮಿತಾ (15) ನಿಶಾ (15) ಇವರೆಲ್ಲರೂ ಕುಳಾಯಿ ಚಿತ್ರಾಪುರ ಬೀಚ್ ಗೆ ನೀರಲ್ಲಿ ಆಟ ಆಡಲು ತೆರಳಿದಾಗ ನೀರಿನ ಅಲೆಯ ರಭಸಕ್ಕೆ ನೀರಿನಲ್ಲಿ ಮುಳುಗಿದ್ದು, ಇವರನ್ನು ಹತ್ತಿರದ ಮೀನುಗಾರರು ಮತ್ತು ಸ್ಥಳೀಯರು ರಕ್ಷಣೆ ಮಾಡಿದ್ದು, ನಾಲ್ಕು ಜನ ಆರೋಗ್ಯವಾಗಿದ್ದು, ತೇಜಸ್ ಎಂಬ ಬಾಲಕನನ್ನು ಮುಕ್ಕ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ನಿಶಾ ಎಂಬ ಬಾಲಕಿಯು ಮೃತಪಟ್ಟಿರುತ್ತಾರೆ.
ನಿಶಾ ಮತ್ತು ಅಶ್ವಿತಾ ನೇಪಾಳ ಮೂಲದವರು ಎಂದು ವರದಿಯಾಗಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…