ಬಂಟ್ವಾಳ: ಪಾರಂಪರಿಕ ಕಟ್ಟಡಗಳ ಸೌಂದರ್ಯಗಳಿಗೆ ಧಕ್ಕೆ ಉಂಟಾಗುತ್ತಿರುವುದರಿಂದ ಸೌಂದರ್ಯ ಕಾಪಾಡುವ ನೆಪದಲ್ಲಿ ವಿಧಾನಸೌಧ, ವಿಕಾಸಸೌಧ ಕಟ್ಟಡಗಳಲ್ಲಿ ಆಯುಧ ಪೂಜೆ ಸಂದರ್ಭದಲ್ಲಿ ಪವಿತ್ರ ಕುಂಕುಮ, ಅರಶಿನ,ಕುಂಬಳಕಾಯಿ, ಧಾರ್ಮಿಕ ರಂಗೋಲಿ ಬಳಸದಂತೆ ರಾಜ್ಯ ಸರಕಾರ ಹೊರಡಿಸಿದ ಸುತ್ತೋಲೆ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದು,ಕರ್ನಾಟಕ ಕಾಂಗ್ರೆಸ್ ಸರಕಾರದ ಈ ಧೋರಣೆಯನ್ನು ಬಿಜೆಪಿ ಮುಖಂಡ,ಬಂಟ್ವಾಳ ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಖಂಡಿಸಿದ್ದಾರೆ.
ಈ ಕುರಿತು ಕರ್ನಾಟಕ ಸರಕಾರದ ಮುಖ್ಯಕಾರ್ಯದರ್ಶಿಯವರಿಗೆ ಲಿಖಿತ ಪತ್ರ ಬರೆದಿರುವ ಅವರು, ಈ ಆದೇಶವನ್ನುತಕ್ಷಣದಿಂದ ವಾಪಾಸ್ ಪಡೆದು ಅನಾದಿಕಾಲದಿಂದಲೂ ಹಿಂದೂ ಧಾರ್ಮಿಕ ಪದ್ದತಿಯಂತೆ ಆಯುಧಪೂಜೆಯನ್ನು ಯಥಾವತ್ತಾಗಿ ಮುಂದುವರಿಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
ಕುಂಕುಮ, ವಿಭೂತಿ ಇವಗಳೆಲ್ಲವನ್ನು ಹಿಂದೂ ಧರ್ಮದ ಆಚರಣೆಗಳಲ್ಲಿ ಬಳಕೆ ಮಾಡಿ ಬಳಿಕ ಭಕ್ತರಿಗೆ ಹಂಚುವ ಕ್ರಮ ಪುರಾತನದಿಂದಲೂ ನಡೆದು ಕೊಂಡು ಬಂದಿರುವ ಸಂಪ್ರದಾಯವಾಗಿದೆ. ಈ ಹಿನ್ನೆಲೆಯಲ್ಲಿ ಅದನ್ನು ನಿಷೇಧಿಸಿ ಆಯುಧ ಪೂಜೆ ನೆರವೇರಿಸಲು ಮುಂದಾಗಿರುವ ಸರಕಾರದ ಕ್ರಮ ಸಮಂಜಸವಲ್ಲ ಎಂದು ಪ್ರಭು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ ಮುಂದುವರಿದರೆ ಕ್ಷುಲ್ಲಕ ನೆಪವೊಡ್ಡಿ ಆಯುಧ ಪೂಜೆಯನ್ನೇ ನಿಷೇಧಿಸಲು ಕಾಂಗ್ರೆಸ್ ಸರಕಾರ ಮುಂದಾದರೂ ಅಚ್ಚರಿಪಡಬೇಕಾಗಿಲ್ಲ,ಈ ನಿಟ್ಟಿನಲ್ಲಿಸಮಸ್ತ ಹಿಂದೂ ಸಮಾಜದ
ಪರವಾಗಿ ಈ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಲು ಕ್ರಮಕೈಗೊಳ್ಳುವಂತೆ ಪ್ರಭಾಕರ ಪ್ರಭು ಆಗ್ರಹಿಸಿದ್ದಾರೆ
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…