ಸುರತ್ಕಲ್: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಹೊಯ್ಗೆಬೈಲ್ ಬಳಿಯ ಸ್ಕೇಟಿಂಗ್ ಮೈದಾನದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಸ್ಪೀಡ್ ರೋಲರ್ ಸ್ಕೇಟಿಂಗ್ ನಲ್ಲಿ ಕುಳಾಯಿ ರೆಹಾನಾ ಸ್ಕೂಲ್ ನ ವಿದ್ಯಾರ್ಥಿ ಅಕ್ಷರ್ ಜೆ ಶೆಟ್ಟಿ ಸುರತ್ಕಲ್ ಕ್ವಾಡ್ 1 ಲ್ಯಾಪ್ ರೋಡ್ ರೇಸ್ ನಲ್ಲಿ ಚಿನ್ನದ ಪದಕ ಗಳಿಸಿ, ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.
ಅಕ್ಷರ್ ಜೆ ಶೆಟ್ಟಿ ಪ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಮತ್ತು ಹೆಚ್ ಪಿಸಿಎಲ್ ಉದ್ಯೋಗಿ ಚಿತ್ರಾ ಜೆ ಶೆಟ್ಟಿಯವರ ಪುತ್ರ. ಈತ ಅನಘ ಸ್ಕೇಟಿಂಗ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ದೀಪಾಂಶು ಅವರಿಂದ ತರಬೇತಿ ಪಡೆಯುತ್ತಿದ್ದಾನೆ. ಸಾಧಕ ಸ್ಕೇಟಿಂಗ್ ಪಟುಗಳಿಗೆ ಮೇಯರ್ ಸುಧೀರ್ ಶೆಟ್ಟಿ ಪ್ರಶಸ್ತಿ ವಿತರಿಸಿದರು. ಕಾರ್ಪೋರೇಟರ್ ಗಣೇಶ್ ಕುಲಾಲ್, ದ.ಕ. ರೋಲರ್ ಸ್ಪೋಟ್ಸ್೯ ಅಸೋಸಿಯೇಶನ್ ಅಧ್ಯಕ್ಷ ಫ್ರಾನ್ಸಿಸ್ ಕೊನ್ಸೆಸೋ, ಕಾರ್ಯದರ್ಶಿ ಮಹೇಶ್ ಕುಮಾರ್, ಪ್ರವೀಣ್ ಕುಮಾರ್, ಸಂತೋಷ್ ಶೆಟ್ಟಿ, ಜಯರಾಜ್, ಲೆಸ್ಟರ್ ಡಿ ಸೋಜ, ಉಮೇಶ್ ಗಟ್ಟಿ, ಅರ್ಶದ್ ಮತ್ತು ಮುಖ್ಯ ತೀರ್ಪುಗಾರ ಅಂತೋಣಿ ಜೇಮ್ಸ್ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…