ದಕ್ಷಿಣ ಕನ್ನಡ : ಬೆಂಗಳೂರಿನ ಅರಮನೆ ಮೈದಾನದಲ್ಲಿ ಮುಂದಿನ ತಿಂಗಳು ನಡೆಯಲಿರುವ, ಕಂಬಳಕ್ಕಾಗಿ ನಿರ್ಮಿಸಿರುವ ‘ಬೆಂಗಳೂರು ಕಂಬಳ ನಮ್ಮ ಕಂಬಳ ಕಚೇರಿ’ಯನ್ನು ವಿದ್ಯುಕ್ತವಾಗಿ ಉದ್ಘಾಟಿಸಲಾಯಿತು.

ಪುತ್ತೂರು ಶಾಸಕರ ನೇತೃತ್ವದಲ್ಲಿ ಮೊತ್ತ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಆಯೋಜಿಸಿರುವ, ಕರಾವಳಿ ಪ್ರಸಿದ್ಧ ಜಾನಪದ ಕ್ರೀಡೆ ಕಂಬಳ ಅದ್ದೂರಿಯಾಗಿ ನಡೆಯಲು ಈಗಾಗಲೇ ಸಿದ್ಧತೆ ನಡೆಸಿದ್ದು, ಕಂಬಳದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಬೇಕಾದ ಕಚೇರಿಯನ್ನು ಇಂದು ಹಿರಿಯರ ಮತ್ತು ಗಣ್ಯರ ಉಪಸ್ಥಿತಿಯಲ್ಲಿ ತೆರೆಯಲಾಗಿದೆ, ಮುಂದಿನ ದಿನಗಳಲ್ಲಿ ಬೆಂಗಳೂರು ಕಂಬಳಕ್ಕೆ ಸಂಬಂಧಿಸಿದ ಎಲ್ಲಾ ಕೆಲಸಗಳನ್ನು ಕಚೇರಿಯಿಂದ ನಿರ್ವಹಿಸಲು ಸಾಧ್ಯವಾಗುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ವರದಿಯಾಗಿದೆ ಈ ವೇಳೆ ಕಂಬಳ ಸಮಿತಿ ಅಧ್ಯಕ್ಷ, ಪುತ್ತೂರು ಶಾಸಕ ಅಶೋಕ್ ರೈ, ಉಪಾಧ್ಯಕ್ಷರಾದ ಗುಣರಂಜನ್ ಶೆಟ್ಟಿ, ದಿನೇಶ್ ಹೆಗಡೆ, ಕಾರ್ಯಾಧ್ಯಕ್ಷ ಗುರುಕಿರಣ್, ಖಜಾಂಚಿ ಸುಂದರ್ ರಾಜ್ ರೈ, ಪ್ರಧಾನ ಕಾರ್ಯದರ್ಶಿ ಕೆ.ವಿ.ರಾಜೇಂದ್ರಕುಮಾರ್, ಕಾರ್ಯಾಧ್ಯಕ್ಷ ಉಮೇಶ್ ಶೆಟ್ಟಿ, ಉದಯ್ ಶೆಟ್ಟಿ, ಜಿ.ಶ್ರೀನಿವಾಸ್ ಸೇರಿದಂತೆ ಇನ್ನಿತರ ಪದಾಧಿಕಾರಿಗಳು ಉಪಸ್ಥಿತರಿದ್ದರು.



