ಮುಲ್ಕಿ: ಇಲ್ಲಿಗೆ ಸಮೀಪದ ಕಾರ್ನಾಡ್ ಹರಿಹರ ಕ್ಷೇತ್ರದ ಬಳಿಯ ನಿವಾಸಿ ರವಿರಾಜ್ ಶೆಟ್ಟಿ ಕವತ್ತಾರು ಬೈಲಗುತ್ತು(72) ರವರು ಅನಾರೋಗ್ಯದಿಂದ ಶುಕ್ರವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.
ಅವರು ಪತ್ನಿ ಓರ್ವ ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.ಕಾರ್ನಾಡ್ ಪರಿಸರದಲ್ಲಿ ರವಿರಾಜ್ ಮಾಸ್ಟರ್ ಎಂದು ಖ್ಯಾತಿ ಪಡೆದಿದ್ದ ಅವರು ಕಾರ್ನಾಡ್ ಸಿ ಎಸ್ ಐ ಶಾಲೆಯ ಪ್ರಾಂಶುಪಾಲರಾಗಿ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಕಾರ್ನಾಡ್ ಪಿಎಸ್ಐ ಶಾಲೆಯಲ್ಲಿ ಆಂಗ್ಲ ಆಂಗ್ಲ ಮಾಧ್ಯಮಕ್ಕೆ ಬಹಳಷ್ಟು ಶ್ರಮಿಸಿ ಚಾಲನೆ ನೀಡಿದ್ದರು. ಮುಲ್ಕಿ ಬಂಟರ ಸಂಘದ ಕಾರ್ಯದರ್ಶಿಯಾಗಿ, ಮುಲ್ಕಿ ಸುಂದರ್ ರಾಮ್ ಶೆಟ್ಟಿ ಟ್ರಸ್ಟ್ ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಮುಲ್ಕಿ ಪರಿಸರ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.
ಅವರ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ,ವೇ.ಮೂ.ವಾದಿರಾಜ ಉಪಾಧ್ಯಾಯ ಕೊಲಕಾಡಿ,ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,
ಶಾಸಕ ಉಮಾನಾಥ ಕೋಟ್ಯಾನ್, ಮಾಜೀ ಸಚಿವ ಅಭಯ ಚಂದ್ರ,ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್, ಮುಲ್ಕಿ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಕುಮಾರ್ ಹೆಗ್ಡೆ,ಅಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಪದಾಧಿಕಾರಿಗಳಾದ ಅಶೋಕ್ ಕುಮಾರ್ ಶೆಟ್ಟಿ, ಗಂಗಾಧರ್ ಶೆಟ್ಟಿ ಬರ್ಕೆ ತೋಟ,ಮುಲ್ಕಿ ಜಿಎಸ್‌ಬಿ ಸಭಾದ ಅತುಲ್ ಕುಡ್ವ ,ಮುಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜೀ ಅಧ್ಯಕ್ಷ ಗೋಪಿನಾಥ ಪಡಂಗ , , ಮುಲ್ಕಿ ವಿಜಯ ರೈತ ಸೇವಾ ಸೊಸೈಟಿ ಅಧ್ಯಕ್ಷ ರಂಗನಾಥ ಶೆಟ್ಟಿ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಗೌರವಾಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಅತಿಕಾರಿ ಬೆಟ್ಟು ಗ್ರಾಪಂ ಉಪಾಧ್ಯಕ್ಷ ಮನೋಹರ ಕೋಟ್ಯಾನ್ , ಮುಲ್ಕಿ ನ.ಪಂ ಮಾಜೀ ಅಧ್ಯಕ್ಷ ಸುಭಾಶ್ ಶೆಟ್ಟಿ, ಸದಸ್ಯ ಹರ್ಷ ರಾಜ ಶೆಟ್ಟಿ, ಸತೀಶ್ ಅಂಚನ್, ಯೋಗೀಶ್ ಕೋಟ್ಯಾನ್,ಪುತ್ತು ಬಾವ, ಮುಲ್ಕಿ ನ.ಪಂ.ಮುಖ್ಯಾಧಿಕಾರಿ ಇಂದು ಎಂ,ಮಾಜೀ ಅಧ್ಯಕ್ಷ ಸುನಿಲ್ ಆಳ್ವ, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ಶೀತಲ್ ಸುಶೀಲ್,ಹಿಂದೂ ಯುವ ಸೇನೆ ಮುಲ್ಕಿ ಘಟಕದ ಅಧ್ಯಕ್ಷ ದಿನೇಶ್ ಕೊಲ್ನಾಡ್, ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಕೋಟ್ಯಾನ್, ಕೆಪಿಸಿಸಿ ಕೋ ಆರ್ಡಿನೇಟರ್ ವಸಂತ್ ಬೆರ್ನಾಡ್, ಡಾ. ಹರಿಶ್ಚಂದ್ರ ಪಿ.ಸಾಲ್ಯಾನ್, ನಿವೃತ್ತ ಉಪನ್ಯಾಸಕ ಸ್ಯಾಮ್ ಮಾಬೆನ್, ಶಶಿಂದ್ರ ಸಾಲ್ಯಾನ್ ಪಯ್ಯೋಟ್ಟು , ಉದಯಕುಮಾರ್ ಶೆಟ್ಟಿ ಅಧಿಧನ್ , ಉದ್ಯಮಿ ಶಿವರಾಮ್ ಜಿ ಅಮೀನ್, ಕಿಶೋರ್ ಶೆಟ್ಟಿ ಬಪ್ಪನಾಡು, ಗೌತಮ್ ಜೈನ್ ಮುಲ್ಕಿ ಅರಮನೆ, ಉಮೇಶ್ ಮಾನಂಪಾಡಿ, ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ, ಸದಸ್ಯರಾದಪುನೀತ್ ಕೃಷ್ಣ, ಹರೀಶ್ ಹೆಜ್ಮಾಡಿ,ಕಾರ್ನಾಡ್ ಸಿಎಸ್ಐ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದ, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ರವಿರಾಜ್ ಶೆಟ್ಟಿ ರವರ ಅಂತ್ಯಕ್ರಿಯೆ ಶನಿವಾರ ಬೆಳಗ್ಗೆ 11.30 ಗಂಟೆಗೆ ಅವರ ಸ್ವಗ್ರಹ ದುರ್ಗಾ ಸುರಕ್ಷಿತಾ ಕಾರ್ನಾಡ್ ನಲ್ಲಿ ನಡೆಯಲಿರುವುದು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…