ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅ. 28 ರಂದು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಶ್ರೀಮತಿ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ದಿನಪೂರ್ತಿ ಜರಗಲಿರುವ “ವಿಶ್ವ ಬಂಟರ ಕ್ರೀಡಾಕೂಟ” ಹಾಗೂ ಅ. 29 ರಂದು ಉಡುಪಿಯ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ವಠಾರದಲ್ಲಿ ಶ್ರೀ ಕನ್ಯಾನ ಸದಾಶಿವ ಶೆಟ್ಟಿ ವೇದಿಕೆಯಲ್ಲಿ ನಡೆಯಲಿರುವ “ವಿಶ್ವ ಬಂಟರ ಸಾಂಸ್ಕೃತಿಕ ವೈಭವ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಗೊಳಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ವಲಯ ಸಂಘಗಳ ಅಧ್ಯಕ್ಷರು, ಮಹಿಳಾ ವಿಭಾಗ ಯುವ ವಿಭಾಗ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.



