ಕಿನ್ನಿಗೋಳಿ : ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದ ಸಭೆ, ಮನೆ ಮನೆ ಜಾಥಾ ಕಾರ್ಯಕ್ರಮ ಹಾಗೂ ಸಂಜೀವಿನಿ ಒಕ್ಕೂಟದ ವಾರ್ಷಿಕ ಸಭೆಯು ಮುಲ್ಕಿ ತಾಲೂಕಿನ ಕೆಮ್ರಾಲ್ ಗ್ರಾಮ ಪಂಚಾಯತ್ ನಲ್ಲಿ ಅ. 21 ರಂದು ಪಂಚಾಯತ್ ಅಧ್ಯಕ್ಷರಾದ ಮಯ್ಯದ್ದಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎನ್ ಆರ್‌ಎಲ್‌ಎಮ್ ಸಂಜೀವಿನಿ ಒಕ್ಕೂಟದ ಸದಸ್ಯರಿಗೆ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದಡಿ ನರೇಗಾ ಯೋಜನೆಯ ಕೈಗೊಳ್ಳಬಹುದಾದ ವಿವಿಧ ಕಾಮಗಾರಿ ಹಾಗೂ ತೋಟಗಾರಿಕಾ ಬೆಳೆಗಳ ಮಾಹಿತಿ ಹಾಗೂ ಮಹಿಳಾ ಭಾಗವಹಿಸುವಿಕೆಯ ಬಗ್ಗೆ ಮಾಹಿತಿ ನೀಡಿ ಅರ್ಜಿಯನ್ನು ಸಲ್ಲಿಸುವಂತೆ ತಾಲೂಕು ಐಇಸಿ ಸಂಯೋಜಕರು ತಿಳಿಸಿದರು.
ಈ ವೇಳೆ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು,ಪಂಚಾಯತ್ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕಸಹಾಯಕರು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಎಂ.ಬಿ.ಕೆ ಸುನೀತಾ, ಎಲ್. ಸಿ. ಆರ್. ಪಿ. ಹಾಗೂ ಒಕ್ಕೂಟದ ಸದಸ್ಯರು, ಪಂಚಾಯತ್ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಭೆಯ ಬಳಿಕ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನದಡಿ ಜಾಥಾ ಕಾರ್ಯಕ್ರಮ ನಡೆಯಿತು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…