ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಅಕ್ಟೋಬರ್ ದಿನಾಂಕ 28 & 29 ರಂದು ಉಡುಪಿಯಲ್ಲಿ ಜರಗುವ” ವಿಶ್ವ ಬಂಟರ ಸಮ್ಮೇಳನ-2023ರ ಆಮಂತ್ರಣ ಪತ್ರಿಕೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ. ಎನ್ ರಾಜೇಂದ್ರ ಕುಮಾರ್ ರವರಿಗೆ ರಾಮಕೃಷ್ಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ ಅಧ್ಯಕ್ಷ ಶ್ರೀ ಜೈರಾಜ್ ಬಿ. ರೈ ಹಾಗೂ ಸಮ್ಮೇಳನದ ಆರ್ಥಿಕ ಸಮಿತಿಯ ಸಂಚಾಲಕ ಹಾಗು ಪಡುಬಿದ್ರಿ ಬಂಟರ ಸಂಘದ ಅಧ್ಯಕ್ಷ ಶ್ರೀ ದೇವಿ ಪ್ರಸಾದ್ ಶೆಟ್ಟಿ ಬೆಳಪು ರವರು ಸಮಾರಂಭಕ್ಕೆ ಮುಖ್ಯ ಅಥಿತಿಯಾಗಿ ಭಾಗವಹಿಸುವಂತೆ ಆಮಂತ್ರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ಶ್ರೀ ಐಕಳ ಹರೀಶ್ ಶೆಟ್ಟಿಯವರ ಮನವಿಗೆ ಸ್ಪಂದಿಸಿ ವಿಶ್ವ ಬಂಟರ ಸಮ್ಮೇಳನಕ್ಕೆ ರೂ. 5 ಲಕ್ಷ ದೇಣಿಗೆಯ ಚೆಕ್ಕನ್ನು ಒಕ್ಕೂಟದ ಆಡಳಿತಾಧಿಕಾರಿ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್ ರವರಿಗೆ ನೀಡಿ ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿ ಎಂದು ಶುಭ ಹಾರೈಸಿದರು.



