ಹಳೆಯಂಗಡಿ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ತೋಕೂರು, ಹಳೆಯಂಗಡಿ ಇಲ್ಲಿ ನವರಾತ್ರಿಯ ಪ್ರಯುಕ್ತ ವರ್ಷಂಪ್ರತಿ ಜರಗುವ ಸಾಮೂಹಿಕ ದುರ್ಗಾನಮಸ್ಕಾರ ಪೂಜೆಯು ಶ್ರೀ ವೇದಮೂರ್ತಿ ಶಿಬರೂರು ಗೋಪಾಲಕೃಷ್ಣ ತಂತ್ರಿಯವರ ನೇತ್ರತ್ವದಲ್ಲಿ ಜರಗಿತು. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಧುಸೂದನ್ ಆಚಾರ್ಯ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರಿದಾಸ್ ಭಟ್ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು , ದೇವಸ್ಥಾನದ ಸಿಬ್ಬಂದಿ ವರ್ಗ ಊರಿನ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.








