ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ವಿಶ್ವ ಬಂಟರ ಸಮ್ಮೇಳನದ ಪ್ರಯುಕ್ತ ಅಕ್ಟೋಬರ್ 28 ಮತ್ತು 29ರಂದು ನಡೆಯಲಿರುವ ವಿಶ್ವ ಬಂಟರ ಕ್ರೀಡಾಕೂಟ ಹಾಗೂ ವಿಶ್ವ ಬಂಟರ ಸಾಂಸ್ಕೃತಿಕ ವೈಭವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅಕ್ಟೋಬರ್ 22 ರಂದು ಆದಿತ್ಯವಾರ ಬಂಟರ ಸಂಘ, ಉಪ್ಪೂರು ಇದರ ಕಛೇರಿಯಲ್ಲಿ ಅಧ್ಯಕ್ಷ ಡಾ. ಪ್ರಶಾಂತ್ ಶೆಟ್ಟಿ ನರ್ನಾಡು ಇವರ ಸಮ್ಮುಖ A.J. College of Engineering ಇದರ ಪ್ರೊಫೆಸರ್ ನರ್ನಾಡು ಕೆಳಮನೆ ಪ್ರಕಾಶ್ ಶೆಟ್ಟಿ ಬಿಡುಗಡೆಗೊಳಿಸಿದರು. ಕಾರ್ಯದರ್ಶಿ ದಿನೇಶ್ ಶೆಟ್ಟಿ ಅಮ್ಮುಂಜೆ, ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ನರ್ನಾಡು, ಹಿರಿಯ ಸದಸ್ಯ ಮಾಧವ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ತದನಂತರ ಕೊಳಲಗಿರಿಯಲ್ಲಿ ನೆರೆದ ಬಂಟ ಪ್ರಮುಖರಿಗೆ ಆಮಂತ್ರಣ ಪತ್ರಿಕೆಯನ್ನು ವಿತರಿಸಿ ಕಾರ್ಯಕ್ರಮಕ್ಕೆ ಹೃತ್ಪೂರ್ವಕವಾಗಿ ಆಮಂತ್ರಿಸಲಾಯಿತು.





