ಜನ ಮನದ ನಾಡಿ ಮಿಡಿತ

Advertisement

ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.


ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ‌ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.


ಅದಕ್ಕಾಗಿ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ‌ನೊಂದುಕೊಂಡಿದ್ದು,ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ‌ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ‌ನವರಾತ್ರಿ‌ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡಿದ್ದ.


ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿ್ದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!