ಬಂಟ್ವಾಳ: ಸಾಲದ ಬಾಧೆಯಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಜೀಪದಲ್ಲಿ ನಡೆದಿದೆ.
ಸಜೀಪ ಪಡು ಗ್ರಾಮದ ತಲೆಮೊಗರು ನಿವಾಸಿ ಸನತ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಯುವಕ.
ಸನತ್ ಅವರು ಮೀನು ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮೀನು ಮಾರಾಟಕ್ಕಾಗಿ ಇತ್ತೀಚಿಗೆ ಸಾಲ ಮಾಡಿ ಟೆಂಪೋ ರಿಕ್ಷಾವನ್ನು ಖರೀದಿ ಮಾಡಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಮೀನು ವ್ಯಾಪಾರದಲ್ಲಿ ಹಣ ಕಳೆದುಕೊಂಡು ವಾಹನ ಖರೀದಿಗಾಗಿ ಮಾಡಿದ್ದ ಬ್ಯಾಂಕ್ ಸಾಲದ ಕಂತನ್ನು ಕಟ್ಟಲು ಸಾಧ್ಯವಾಗಿರಿಲ್ಲ ಎಂದು ಹೇಳಲಾಗಿದೆ.
ಅದಕ್ಕಾಗಿ ಟೆಂಪೋ ವನ್ನು ಕೂಡ ಮಾರಾಟ ಮಾಡಿದ್ದ ಎನ್ನಲಾಗಿದೆ. ಜೊತೆಗೆ ಕೋಳಿ ಅಂಕಕ್ಕೆ ಹೋಗುತ್ತಿದ್ದ ಈತ ಅಲ್ಲಿಯೂ ಹಣ ಕಳೆದುಕೊಂಡು ಮಾನಸಿಕವಾಗಿ ನೊಂದುಕೊಂಡಿದ್ದು,ಸಾಲದ ಬಾಧೆಯಿಂದ ಹೊರಬರಲು ಅಸಾಧ್ಯ ಪರಿಸ್ಥಿತಿಯಲ್ಲಿದ್ದ ಈತ ಮನೆಯವರು ಹತ್ತಿರದ ಭಜನಾ ಮಂದಿರದಲ್ಲಿ ನಡೆಯುವ ನವರಾತ್ರಿ ಪೂಜೆ ಗೆ ತೆರಳಿದ್ದ ವೇಳೆ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.
ಪೂಜೆ ಮುಗಿಸಿಕೊಂಡು ಮನೆಗೆ ಬಂದ ವೇಳೆ ಈತನ ಕೋಣೆಗೆ ಬಾಗಿಲು ಹಾಕಿಕೊಂಡಿದ್ದನ್ನು ಗಮನಿಸಿ ಕರೆದಾಗ ಈತನಿಂದ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಹಾಗಾಗಿ ಬಾಗಿಲು ಮುರಿದು ನೋಡಿದಾಗ ಈತ ಪಕ್ಕಾಸಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಎಸ್.ಐ.ಹರೀಶ್ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿ್ದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…