ಮೂಡುಬಿದಿರೆ: ಬಂಟರ ಮಹಿಳಾ ಘಟಕ ಮೂಡುಬಿದಿರೆ ಮತ್ತು ನಡ್ಯೋಡಿ ಮಹಿಳಾ ಮಂಡಲ ಮಾರ್ಪಾಡಿ-ಕಲ್ಲಬೆಟ್ಟು ಇದರ ವತಿಯಿಂದ ಆಳ್ವಾಸ್ ಹೆಲ್ತ್ ಸೆಂಟರ್ ಸಹಕಾರದೊಂದಿಗೆ ಡಾ.ಸುಧಾಕರ ಶೆಟ್ಟಿ ನೇತ್ರತ್ವದಲ್ಲಿ ಸೋಮವಾರ ನಡ್ಯೋಡಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಭಾನುವಾರ ನಡೆಯಿತು.
ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಕ್ಕಳ ತಜ್ಞ ಡಾ.ಸುಧಾಕರ ಶೆಟ್ಟಿ ಪುಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ ದ.ಕ ಮತ್ತು ಉಡುಪಿ ಜಿಲ್ಲೆಯ ಆಯ್ದ ಐವತ್ತು ಗ್ರಾಮಗಳಲ್ಲಿ ಶೀಘ್ರದಲ್ಲೆ ಉಚಿತ ಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ' ಪ್ರಾರಂಭಿಸಲಾಗುವುದು ಎಂದು ಹೇಳಿದರು. ಮಕ್ಕಳಲ್ಲಿ ಕಂಡುಬರುವ ಅಪೌಷ್ಟಿಕತೆಯು ಅವರ ಬೆಳವಣಿಗೆ ಕುಂಠಿತ ಮತ್ತು ರೋಗಗಳಿಗೆ ಕಾರಣವಾಗುತ್ತದೆ. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲು ಮಿಜಾರು, ಕಟೀಲು, ಮುಲ್ಕಿ, ಎಕ್ಕಾರು, ಮಾರ್ಪಾಡಿ, ಪಡುಬಿದ್ರೆ ಸಹಿತ ಅವಳಿ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಈಗಾಗಲೇ ಸರ್ವೆ ಕಾರ್ಯಕ್ರಮ ನಡೆಯುತ್ತಿದೆ. ಡಿಸೆಂಬರ್‌ನಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಿ ನಂತರ ಉಚಿತಕಟೀಲ್ ಸಂಚಾರಿ ಬೇಬಿ ಕ್ಲಿನಿಕ್ ಸೇವೆ’ ಆರಂಭಿಸಲಾಗುವುದು ಎಂದು ಹೇಳಿದರು.
ನಡ್ಯೋಡಿ ಶಾಲೆಯಲ್ಲಿ ಒಟ್ಟು ೨೮ ಮಕ್ಕಳ ತಪಾಸಣೆ ನಡೆಸಲಾಯಿತು. ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಎಸ್. ಹೆಗ್ಡೆ, ಕಾರ‍್ಯದರ್ಶಿ ಸೌಮ್ಯ ಎಸ್. ಶೆಟ್ಟಿ ಹಾಗೂ ಸದಸ್ಯರು ನಡ್ಯೋಡಿ ಮಹಿಳಾ ಮಂಡಲ ಅಧ್ಯಕ್ಷೆ ಗೀತಾ ಪಿ. ಶೆಟ್ಟಿ, ಕಾರ್ಯದರ್ಶಿ ಹೇಮಾವತಿ ಆರ್. ಪೂಜಾರಿ ಮತ್ತಿತರ ಸದಸ್ಯರು ಭಾಗವಹಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…