ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

“ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದವರು ಬಂಗಾರಪ್ಪ” – ದೀನಬಂಧು ಸೇವಾ ಟ್ರಸ್ಟ್ ಅಧ್ಯಕ್ಷ ರಮೇಶ್ ಶೆಟ್ಟಿ ಅಭಿಪ್ರಾಯ

ಶಂಕರಘಟ್ಟ 26: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸರ್ಕಾರಿ ಸೇವೆಗೆ ಸೇರಲು ಹಾಗೂ ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯ ಮಾಡುವ ಸಲುವಾಗಿ ಶೇ 15 ರಷ್ಟು ಕೃಪಾಂಕ ನೀಡುವುದರ ಮೂಲಕ ಸಾವಿರಾರು ಗ್ರಾಮೀಣ ಬಡ ವಿದ್ಯಾರ್ಥಿಗಳ ಬಾಳನ್ನು ಬೆಳಗಿದವರು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ದಿ:ಎಸ್.ಬಂಗಾರಪ್ಪನವರು ಎಂದು ದೀನಬಂಧು ಸೇವಾಟ್ರಸ್ಟ್ ಅಧ್ಯಕ್ಷರಾದ ಎಂ.ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು.


ಅವರು ಇಂದು ಭದ್ರಾವತಿ ತಾಲ್ಲೂಕು ಶಂಕರಘಟ್ಟದಲ್ಲಿರುವ ದೀನಬಂಧು ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ದಿ:ಬಂಗಾರಪ್ಪನವರ 90ನೇ ಹುಟ್ಟುಹಬ್ಬದ ಅಂಗವಾಗಿ ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.
ಆಗಿನ ಸಮಯದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ನಗರದ ವಿದ್ಯಾರ್ಥಿಗಳ ಸಮನಾಗಿ ಅಂಕಗಳನ್ನು ಪಡೆಯಲು ಸಾಧ್ಯವಾಗದೇ ಸರ್ಕಾರಿ ಸೇವೆಯಿಂದ ವಂಚಿತರಾಗುತ್ತಿದ್ದನ್ನು ಮನಗಂಡು ಕೃಪಾಂಕ ನೀಡುವಂತಹ ಐತಿಹಾಸಿಕ ನಿರ್ಣಯ ತೆಗೆದುಕೊಂಡ ಹಿನ್ನಲೆಯಲ್ಲಿ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಸಾವಿರಾರು ಸಂಖ್ಯೆಯಲ್ಲಿ ತಮ್ಮ ಬದುಕಿಗೆ ನೆಲೆ ಕಂಡುಕೊಂಡರು. ಇಷ್ಟೇ ಅಲ್ಲ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಬಡವರಿಗೆ ಮನೆ ಕಟ್ಟಿ ಕೊಡುವ ಆಶ್ರಯ, ಅಕ್ಷಯ, ಆರಾಧನಾ, ವಿಶ್ವ ಇಂತಹ ಹತ್ತಾರು ಕಾರ್ಯಕ್ರಮಗಳ ಮೂಲಕ ಸಮಾಜ ಕಟ್ಟಕಡೆಯ ವ್ಯಕ್ತಿಗೆ ಸಹಾಯ ಮಾಡಿದ ಕೀರ್ತಿ ಬಂಗಾರಪ್ಪನವರಿಗೆ ಸಲ್ಲುತ್ತದೆ ಎಂದರು.
ಈ ಕಾರ್ಯಕ್ರಮದಲ್ಲಿ ಸಿಂಗನಮನೆ ಗ್ರಾ.ಪಂ. ಅಧ್ಯಕ್ಷರಾದ ಮಂಜುಳಮ್ಮ, ತಾವರಘಟ್ಟ ಗಾ.ಪಂ. ಉಪಾಧ್ಯಕ್ಷ ಗಿರೀಶ್, ಕಾಂಗ್ರೆಸ್ ಮುಖಂಡರುಗಳಾದ ಮುರುಗೇಶ್, ಶಶಿಕುಮಾರ್, ಕವಿತಾ ರುದ್ರೇಶ್, ಅಶ್ವಿನಿ ಶಶಿಕುಮಾರ್, ಲಲಿತಮ್ಮ,ಲಕ್ಷ್ಮಮ್ಮ, ತಿಪ್ಪೇರುದ್ರಸ್ವಾಮಿ, ಮಂಟಲಿಂಗಯ್ಯ. ಶ್ರೀಕಾಂತ್ ಮುಂತಾದವರುಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಸರ್ಕಾರಿ ಶಾಲೆಯ ಬಡಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!