ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ನಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಲಾದ ಹೈಮಾಸ್ಟ್ ದೀಪ ವನ್ನು ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಉದ್ಘಾಟಿಸಿ ಮಾತನಾಡಿ ಪಂಚಾಯತ್ ವತಿಯಿಂದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದರು.

ಈ ಸಂದರ್ಭ ಚರ್ಚ್ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ,ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಸಿಸ್ಟರ್ ಶಿಬ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಡಿ ಸೋಜಾ, ಸದಸ್ಯರಾದ ಜಾಕ್ಸನ್ ಸಲ್ದಾನ ನವೀನ್ ಸಾಲಿಯಾನ್, ಲೆಕ್ಕ ಸಹಾಯಕರಾದ ಕೇಶವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.





