ಮಂಗಳೂರು: ಖಾಸಗಿ ಬಸ್ಸು ಜಾನುವಾರುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದು ಜಾನುವಾರು ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಂದು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಕೊಟ್ಟಾರ ಕೋಡಿಕಲ್ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.
ಕುಂದಾಪುರದಿಂದ ಮೈಸೂರು- ಮಂಡ್ಯ ತೆರಳುವ ದುರ್ಗಾಂಬಾ ಮೋಟಾರ್ಸ್ ಬಸ್ ಚಾಲಕನ ಧಾವಂತಕ್ಕೆ ಹೆದ್ದಾರಿಯಲ್ಲಿ ಒಂದು ಹಸು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಂದು ಗಂಭೀರ ಗಾಯಗೊಂಡಿದೆ.
ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಈ ಸಂದರ್ಭ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಬಗ್ಗೆ ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…