ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯಾಗಿ ಕುಮಾರಿ ಸಾನ್ವಿ ಸುವರ್ಣ ಆಯ್ಕೆ

ಬಂಟ್ವಾಳ: ಮಕ್ಕಳ ಕಲಾ ಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ಘಟಕವು ನಿರ್ವಹಿಸುವ ಬಂಟ್ವಾಳ ತಾಲೂಕು 17ನೇಯ ಮಕ್ಕಳ ಸಾಹಿತ್ಯ ಸಮ್ಮೇಳನ ಕಡೇಶಿವಾಲಯ ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಡಿ. 06 ರಂದು ನಡೆಯಲಿದೆ.

ಸಮ್ಮೇಳನದಲ್ಲಿ ತಾಲೂಕಿನ 18ವರ್ಷ ಪ್ರಾಯಕ್ಕಿಂತ ಕೆಳಗಿನ ಮಕ್ಕಳು ಭಾಗವಹಿಸಲಿದ್ದಾರೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕಡೇಶಿವಾಲಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಕುಮಾರಿ ಸಾನ್ವಿ ಸುವರ್ಣ ಆಯ್ಕೆಯಾಗಿರುತ್ತಾರೆ ಎಂದು ‘ಮಕ್ಕಳ ಕಲಾ ಲೋಕ’ ದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿದ್ದಾರೆ. ಸಾನ್ವಿಯವರು ಸುಂದರ ಪೂಜಾರಿ ವಿಶಾಲಾಕ್ಷಿ ದಂಪತಿ ಪುತ್ರಿ.

ಕಲಿಕೆಯಲ್ಲಿ ಉತ್ತಮ ಸಾಧನೆ ತೋರುತ್ತಿರುವ ಬಾಲ ಪ್ರತಿಭೆ. ಎಳೆಯ ವಯಸ್ಸಿನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿರುವ ಇವರು ಭಾರತ ಸರಕಾರದ ಶಿಕ್ಷಣ ಸಚಿವಾಲಯದಿಂದ “ವೀರಗಾಥಾ” ಪ್ರಮಾಣ ಪತ್ರ ಪಡೆದಿರುವರು. ಸಶಸ್ತ್ರ ಪಡೆಗಳ ಶೂರರ ಸ್ಮರಣಾರ್ಥವಾಗಿ ಈ ಪ್ರಮಾಣ ಪತ್ರ ನೀಡಲಾಗಿದೆ. ಭಾರತೀಯ ಜೀವ ವಿಮಾ ನಿಗಮವು ನೀಡುವ ಸಾಧನಾ ಪ್ರಶಸ್ತಿಯನ್ನು ಪಡೆದ ಈಕೆ ಉತ್ತಮ ಮಾತುಗಾರರು. ಸ್ಪರ್ಧಾತ್ಮ ಪರೀಕ್ಷೆಗಳಿಗೆ ತಯಾರಿ, ಫೊಟೋಗ್ರಫಿ, ನೃತ್ಯ, ಬರವಣಿಗೆ, ಚಿತ್ರ ಕಲೆ ಇವರ ಹವ್ಯಾಸ ಎಂದು ಕಡೇಶಿವಾಲಯ ಶಾಲಾ ಮುಖ್ಯೋಪಾಧ್ಯಾಯ ಬಾಬು ಪೂಜಾರಿ ಕೆ. ತಿಳಿಸಿರುತ್ತಾರೆ.


Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!