ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ.
ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯ ವೀರೇಂದ್ರ ಬಂಧಿತರು.
ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ದ್ವಿಚಕ್ರ ವಾಹನವನ್ನು ನಿಲ್ಲಿಸಲು ಹೇಳಿದಾಗ ವಾಹನವನ್ನು ನಿಲಿಸದೇ ವಾಪಾಸು ಹಿಂತಿರುಗಲು ಪ್ರಯತ್ನಿಸುತ್ತಿರುವ ವೇಳೆ ಪೊಲೀಸ್ ನಿರೀಕ್ಷಕ ಸಂದೇಶ್ ಹಾಗೂ ಸಿಬ್ಬಂದಿಯವರು ಅವರುಗಳನ್ನು ವಶಕ್ಕೆ ಪಡೆದು ಕೂಲಂಕುಶವಾಗಿ ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ KA 47, L 9678 ನೇ ಹೀರೋ ಸೂಪರ್ ಮೋಟಾರು ಸೈಕಲ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಜೈನ್ ಪಿ.ಯು ಕಾಲೇಜಿನ ಎದುರು ಇರುವ ಅರ್ಹತ್ ಅಪಾರ್ಟ್ಮೆಂಟ್ ನ ಪಾರ್ಕಿಂಗ್ ಏರಿಯಾದಲ್ಲಿ ನಿಲ್ಲಿಸಿದ KA-19-HD-4034 ನಂಬರಿನ ರಾಯಲ್ ಎನ್ ಫಿಲ್ಡ್ ಕ್ಲಾಸಿಕ್ 350 ಮೋಟಾರು ಸೈಕಲನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದ್ದು ಆರೋಪಿಗಳಿಂದ ಒಟ್ಟು ಅಂದಾಜು ಮೌಲ್ಯ 1,80,000/- ಸ್ವತ್ತುಗಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ.
ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್, IPS ರವರ ಮಾರ್ಗದರ್ಶನದಂತೆ, ಡಿಸಿಪಿಗಳಾದ ಸಿದ್ದಾರ್ಥ ಗೊಯಲ್ IPS (ಕಾ&ಸು), ದಿನೇಶ್ ಕುಮಾರ್, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಂತೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ ಮತ್ತು ಸಿಬಂದಿಗಳು ಕಾರ್ಯಚರಣೆ ನಡೆಸಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…