ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.
ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ ಪಥ ಸಂಚಲನ ರಾ.ಹೆ.ಯ ಬಿ.ಸಿ.ರೋಡಿನ ರಾಜಮಾರ್ಗದಲ್ಲಿ ಸಂಚರಿಸಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ತಿರುವು ಪಡೆದು ವಾಪಾಸ್ ಸರ್ವಿಸ್ ರಸ್ತೆಯ ಮೂಲಕ ಸಾಗಿ ಬಂದು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದ ಮೈದಾನದಲ್ಲಿ ಸಂಪನ್ನಗೊಂಡಿತು.ಆರ್ ಎಸ್ ಎಸ್ ಮುಖಂಡರಾದ ಡಾ.ಪ್ರಭಾಕರ ಭಟ್,ವಿನೋದ್ ಕೊಡ್ಮಾಣ್ ,ಅಜಯ್ ಕೊಂಬ್ರಬೈಲ್ ಬಂಟ್ವಾಳ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ಚಾಳ ಸೇರಿದಂತೆ ನೂರಾರು ಮಂದಿ ಸ್ವಯಂಸೇವಕರು ಗಣವೇಷಧಾರಿಗಳಾಗಿ ಫಥ ಸಂಚಲನದಲ್ಲಿ ಭಾಗವಹಿಸಿದ್ದರು.
ಬಂಟ್ವಾಳ ನಗರ ಪೊಲೀಸರು ಬಂದೋಬಸ್ತ್ ನಡೆಸಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…