ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಅದ್ಭುತವಾದ ಕ್ರಾಂತಿ ಮಾಡಿರುವ ಬಂಟ ಸಮುದಾಯ, ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡಿದೆ. ದೇಶದ ರಕ್ಷಣೆ, ಅಭಿವೃದ್ಧಿ ಸಮಾಜದಲ್ಲಿ ಸ್ವಾಸ್ಯ ಕಾಪಾಡುವಲ್ಲಿ ಈ ಸಮುದಾಯದ ಕೊಡುಗೆ ಅಪಾರ ಎಂದು ಕೇಂದ್ರ ಕೃಷಿ ಮತ್ತು ರೈತರ ಅಭಿವೃದ್ಧಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ವಿಶ್ವ ಬಂಟರ ಸಮ್ಮೇಳನ ಪ್ರಯುಕ್ತ ಉಡುಪಿ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದ ತೆರೆದ ಮೈದಾನದಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಬಂಟರ ಸಾಂಸ್ಕೃತಿಕ ವೈಭವದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಬಂಟರು ಇಡೀ ಸಮಾಜದ ನೇತೃತ್ವ ವಹಿಸುವ ಸಮುದಾಯವಾಗಿದೆ. ಭೂತಸ್ಥಾನ, ನಾಗ, ದೇವಸ್ಥಾನ, ಗರಡಿಯಲ್ಲಿ ನಡೆಯುವ ಯಾವುದೇ ಕಾರ್ಯಗಳ ನೇತೃತ್ವವನ್ನು ಬಂಟ ಸಮುದಾಯ ವಹಿಸಿದರೆ ಅದು ಅಚ್ಚುಕಟ್ಟಾಗಿ ಇರುತ್ತದೆ. ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೇತೃತ್ವ ವಹಿಸುವ ಗಟ್ಟಿ ಸಮುದಾಯ ಆಗಿದೆ. ಶಿಕ್ಷಿತ ಹಾಗೂ ಸುಸಂಸ್ಕೃತ ಸಮುದಾಯದವರಾಗಿರುವ ಬಂಟರು, ತಮ್ಮ ಸಂಸ್ಕೃತಿ ಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರನ್ನು ವೇದಿಕೆಯಲ್ಲಿ ಅಭಿನಂದಿಸಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಜೊತೆ ಕಾರ್ಯದರ್ಶಿ ಚಂದ್ರಹಾಸ ಶೆಟ್ಟಿ, ಕೋಶಾಧಿಕಾರಿ ಉಳ್ತೂರು ಮೋಹನ್ ದಾಸ ಶೆಟ್ಟಿ ಉಪಸ್ಥಿತರಿದ್ದರು.
ನಿತೇಶ್ ಶೆಟ್ಟಿ ಎಕ್ಕಾರ್ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕತಿಕ ಕಲಾ ಬೈಭವದ ತೀರ್ಪುಗಾರರಾಗಿ ಕಾಂತಾರ ಖ್ಯಾತಿಯ ನಟಿ ಮಾನಸಿ ಸುಧೀರ್, ನೃತ್ಯ ಕಲಾವಿದೆ ಪ್ರಥಮ ಪ್ರಸಾದ್ ರಾವ್, ಧಾರವಾಹಿ ನಟ ದಿಲೀಪ್ ಶೆಟ್ಟಿ ಇದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…