ಜನ ಮನದ ನಾಡಿ ಮಿಡಿತ

Advertisement

ವಾಲ್ಮೀಕಿ ಮಹರ್ಷಿಯ ಆದರ್ಶಗಳ ಪಾಲನೆಯಿಂದ ವ್ಯಕ್ತಿತ್ವದ ಬದಲಾವಣೆ ಸಾಧ್ಯ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ: ವಾಲ್ಮೀಕಿ ಮಹರ್ಷಿಯ ಆದರ್ಶ, ಚಿಂತನೆಗಳನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡು ಅವುಗಳನ್ನು ಪಾಲಿಸಿದಾಗ ವ್ಯಕ್ತಿತ್ವದ ಬದಲಾವಣೆ ಸಾಧ್ಯ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.


ನಗರದ ರಜಾತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಸಂಘಟನೆ ಉಡುಪಿ ಇವರ ಸಹಯೋಗದಲ್ಲಿ ಇಂದು ಆಯೋಜಿಸಿದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ, ವಾಲ್ಮೀಕಿ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಒಬ್ಬ ಬೇಟೆಗಾರನ ಕುಟುಂಬದಲ್ಲಿ ಜನಿಸಿದ್ದರೂ ನಂತರದಲ್ಲಿ ವ್ಯಕ್ತಿತ್ವದ ಬದಲಾವಣೆಯಿಂದಾಗಿ ಹಲವಾರು ಆದರ್ಶ ಪುರುಷರಲ್ಲಿ ಇವರು ಒಬ್ಬರಾಗಿದ್ದಾರೆ ಎಂದರು.

ಪರಿಶಿಷ್ಟ ಪಂಗಡದ ವರ್ಗದವರಿಗೆ ಸರಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಅವರ ಬೇಡಿಕೆಗಳನ್ನು ಈಡೇರಿಸಲು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದ ಅವರು, ಪರಿಶಿಷ್ಟ ಪಂಗಡದವರಿಗೆ ಅನುಷ್ಟಾನಗೊಳಿಸಲಾದ ಯೋಜನೆಗಳನ್ನು ಅವರುಗಳ ಮನೆ ಬಾಗಿಲಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಮಾತನಾಡಿ, ಬೇಡನಾಗಿದ್ದ ಮಹರ್ಷಿ ವಾಲ್ಮೀಕಿಯು ಮಹರ್ಷಿಯಾಗಿ ಬದಲಾವಣೆಯಾಗಿದ್ದು, ಇಂತಹ ವ್ಯಕ್ತಿತ್ವದ ಬದಲಾವಣೆ ಯನ್ನು ವಾಲ್ಮೀಕಿ ಯವರಲ್ಲಿ ಕಾಣಬಹುದಾಗಿದೆ. ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಅಸಾಧಾರಣ ಕೆಲಸವನ್ನು ಇವರು ಮಾಡಿದ್ದಾರೆ ಎಂದರು.
ಮಾನವೀಯ ಮೌಲ್ಯಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡಾಗ ವ್ಯಕ್ತಿತ್ವದ ಬೆಳವಣಿಗೆ ಸಾಧ್ಯ. ಈ ಆಧುನಿಕ ಯುಗದಲ್ಲಿ ದ್ವೇಷ ಭಾವನೆಯನ್ನು ಬಿಟ್ಟು, ಪರಸ್ಪರ ಪ್ರೀತಿ ಸೌಹಾರ್ದತೆಯಿಂದ ಜೀವನ ನಡೆಸಬೇಕು ಎಂದರು .
ಮಹರ್ಷಿ ವಾಲ್ಮೀಕಿ ಕುರಿತು ಲೇಖಕಿ ಡಾ. ರೇಖಾ ವಿ ಬನ್ನಾಡಿ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ವಿವಿಧ ಸಾಧಕರನ್ನು‌ ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ. ಎಸ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಶ್ರೀನಿವಾಸ ರಾವ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಮುದಾಯಗಳ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ದೂದ್ ಪೀರ್ ಸ್ವಾಗತಿಸಿದರು, ಶ್ರೀದೇವಿ ನಿರೂಪಿಸಿ, ವಿಶ್ವನಾಥ್ ಶೆಟ್ಟಿ ವಂದಿಸಿದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!